PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮೇ : ಅನಧಿಕೃತ ಶಾಲೆಗಳಲ್ಲಿ ಮಕ್ಕಳನ್ನು ದಾಖಲು ಮಾಡದಂತೆ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಎ. ಶ್ಯಾಮಸುಂದರ್ ಅವರು ಮಕ್ಕಳ ಪೋಷಕರಿಗೆ ಕರೆ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅನುಮತಿ ಪಡೆದು ಕೊಪ್ಪಳ ತಾಲೂಕಿನಲ್ಲಿ ಅಧಿಕೃತವಾಗಿ ನಡೆಯುತ್ತಿರುವ ಖಾಸಗಿ ಅನುದಾನ ರ"ತ ಪ್ರಾಥ"ಕ ಹಾಗೂ ಪ್ರೌಢಶಾಲೆಗಳ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಪ್ರಕಟಿಸಲಾಗಿದೆ. ಈ ಶಾಲೆಗಳಲ್ಲಿ ಮಾತ್ರ ಪೋಷಕರು ತಮ್ಮ ಮಕ್ಕಳನ್ನು ದಾಖಲಾತಿ ಮಾಡಿಸಬೇಕು. ಯಾವುದೇ ಕಾರಣಕ್ಕೂ ಅನಧಿಕೃತ ಶಾಲೆಗಳಲ್ಲಿ ದಾಖಲಾತಿ ಮಾಡಿಸಬಾರದು. ಒಂದು ವೇಳೆ ಯಾವುದೇ ಅನಧಿಕೃತ ಶಾಲೆಗಳು ನಡೆಯುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ, ಕೂಡಲೆ ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಮಾ"ತಿ ನೀಡಬಹುದಾಗಿದೆ. ಅನಧಿಕೃತ ಶಾಲೆಗಳಲ್ಲಿ ಮಕ್ಕಳನ್ನು ದಾಖಲು ಮಾಡಿದಲ್ಲಿ ಸಂಬಂಧಿಸಿದ ಪಾಲಕರೇ ಜವಾಬ್ದಾರರಾಗಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ. ಶ್ಯಾಮಸುಂದರ್ ಅವರು ಎಚ್ಚರಿಕೆ ನೀಡಿದ್ದಾರೆ.

Advertisement

0 comments:

Post a Comment

 
Top