ಕೊಪ್ಪಳ ಮೇ : ಈ ವರ್ಷದ ಶ್ರೀ ಹುಲಿಗೆಮ್ಮ ದೇವಿ ಜಾತ್ರೆ ಮೇ. ೨೮ ರಿಂದ ಜೂನ್ ೦೮ ರವರೆಗೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ಮನವಿ ಮಾಡಿದ್ದಾರೆ.
ಶ್ರೀ ಹುಲಿಗೆಮ್ಮ ದೇವಿ ಜಾತ್ರೆ ಅಂಗವಾಗಿ ಮೇ. ೨೮ ರಂದು ಕಣಕಣಧಾರಣ, ಜೂ. ೦೫ ರಂದು ಉತ್ಸವ, ಜೂ. ೦೬ ರಂದು ಅಕ್ಕಿಪಡಿ ಹಾಗೂ ಅಂದು ಸಂಜೆ ೫-೩೦ ಗಂಟೆಗೆ ಮಹಾರಥೋತ್ಸವ ನೆರವೇರಲಿದೆ. ಅಲ್ಲದೆ ಜೂ. ೭ ರಂದು ಬಾಳಿದಂಡಿಗಿ, ಕೊಂಡದ ಪೂಜಾ, ಗಂಗಾದೇವಿ ಪೂಜಾ, ಬಾಳಿದಂಡಿಗೆ ಆರೋಹಣ, ೦೮ ರಂದು ಪಾಯಸ ಅಗ್ನಿಕುಂಡ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಹುಲಿಗೆಮ್ಮ ದೇವಿಗೆ ಸಲ್ಲಿಸುವ ಮುಡುಪು, ಬೆಳ್ಳಿ, ಬಂಗಾರ ಇತ್ಯಾದಿ ಕಾಣಿಕೆಗಳನ್ನು, ದೇವಸ್ಥಾನದ ಕಚೇರಿಯಲ್ಲಿ ಕೊಟ್ಟು ರಶೀದಿ ಪಡೆಯಬೇಕು. ಜಾತ್ರೆಯ ಸಂದರ್ಭದಲ್ಲಿ ಯಾವುದೇ ಪ್ರಾಣಿ ಬಲಿ ನೀಡುವುದನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು. ಜಿಲ್ಲಾಧಿಕಾರಿಗಳ ಆದೇಶದಂತೆ ಶ್ರೀ ಹುಲಿಗೆಮ್ಮ ದೇವಸ್ತಾನದ ಮುಂಭಾಗದಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಜಾತ್ರೆಗೆ ಆಗಮಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕೊಪ್ಪಳ, ಗಂಗಾವತಿ ಹಾಗೂ ಹೊಸಪೇಟೆಂದ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರ್ರೀ ಹುಲಿಗೆಮ್ಮ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಸಿ.ಎಸ್. ಚಂದ್ರಮೌಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment