ಕೊಪ್ಪಳ ಜೂ. : ಹಿಂದುಳಿದ ಹೈದ್ರಾಬಾದ್-ಕರ್ನಾಟಕ ಪ್ರದೇಶದ ಜನರ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಜಾರಿಗೊಳಿಸಿರುವ ವಾಜಪೇಯಿ ಆರೋಗ್ಯಶ್ರೀ ಯೋಜನೆಯು ಬಡಜನರ ಪಾಲಿಗೆ ವರದಾನವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ.
ನಗರದ ಶ್ರೀ ಗವಿಸಿದ್ದೇಶ್ವರ ಆಯುರ್ವೇದಿಕ್ ಮಹಾವಿದ್ಯಾಲಯ ಆವರಣದಲ್ಲಿ ಏರ್ಪಡಿಸಲಾಗಿದ್ದ ವಾಜಪೇಯಿ ಆರೋಗ್ಯಶ್ರೀ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆ ನೆರವೇರಿಸಿ ಇಂದು ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ೨೫೦ ಹಾಸಿಗೆಗಳ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಇದಕ್ಕೆ ಪೂರಕವಾಗಿ ಜಿಲ್ಲೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಮಂಜೂರಾತಿಗಾಗಿ ಮನವಿಗಳು ಬರುತ್ತಿವೆ. ಆಂಬುಲೆನ್ಸ್ ನಂತೆ ೧೦೪ ಸಂಚಾರಿ ಆಸ್ಪತ್ರೆ ಸೌಲಭ್ಯ ಯೋಜನೆಯನ್ನು ಸದ್ಯದಲ್ಲಿಯೇ ಜಾರಿಗೆ ತರಲಾಗುವುದು ಎಂದು ಸಚಿವ ಶ್ರೀರಾಮುಲು ಅವರು ಪ್ರಕಟಿಸಿದರು.
0 comments:
Post a Comment