ಕೊಪ್ಪಳ : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳ ಕಾರ್ಯಾಲಯವನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣದಲ್ಲಿರುವ ಎ.ಟಿ.ಐ. ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ವಿವರಗಳನ್ನು ದೂರವಾಣಿ ಸಂ: ೨೩೧೪೭೩ ಕ್ಕೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯಲ್ಲಿನ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿಗಾಗಿ ನಿಗದಿಪಡಿಸಿದ್ದ ಅವಧಿಯನ್ನು ಅ. ೨೪ ರವರೆಗೆ ವಿಸ್ತರಿಸಿದೆ.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ ೨೦೦೭ ರನ್ವಯ ಎಲ್ಲ ಖಾಸಗಿ ವೈದ್ಯಕೀಯ ಸಂಸ್ಥೆಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನೊಂದಣಿಗಾಗಿ ಕಳೆದ ಫೆಬ್ರವರಿ ೦೭ ಕ್ಕೆ ಅಂತಿಮ ದಿನಾಂಕವಾಗಿ ನಿಗದಿಪಡಿಸಲಾಗಿತ್ತು. ಆದರೆ ಸರ್ಕಾರ ಈಗ ಈ ಅವಧಿಯನ್ನು ಅ. ೨೪ ರವರೆಗೆ ವಿಸ್ತರಿಸಿದ್ದು, ಜಿಲ್ಲೆಯಲ್ಲಿ ಇದುವರೆಗೂ ನೊಂದಣಿ ಮಾಡಿಕೊಳ್ಳದ ವೈದ್ಯಕೀಯ ಸಂಸ್ಥೆಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ನೊಂದಣಿ ಮಾಡಿಸಿಕೊಳ್ಳಬೇಕು. ನೊಂದಣಿಗಾಗಿ ನಿಗದಿತ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೊಪ್ಪಳ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇದೇ ಕಚೇರಿಗೆ ಸಲ್ಲಿಸಬೇಕು. ನೋಂದಣಿಗೊಳ್ಳದ ವೈದ್ಯಕೀಯ ಸಂಸ್ಥೆಗಳು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಸಿ.ಬಿ. ಬಸವರಾಜ್ ಅವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
0 comments:
Post a Comment