ಕೊಪ್ಪಳ : ಸಾರ್ವಜನಿಕ ರಸ್ತೆ ಹಾಗೂ ಮುಖ್ಯ ರಸ್ತೆಗಳಲ್ಲಿ ಅಕ್ರಮವಾಗಿ ನಿರ್ಮಿಸಲಾಗಿರುವ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸಮುದಾಯ ಭವನಗಳನ್ನು ತೆರವುಗೊಳಿಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿರುವುದರಿಂದ ಅಂತಹ ಅನಧಿಕೃತ ಕಟ್ಟಡಗಳನ್ನು ಸಂಬಂಧಪಟ್ಟವರು ಕೂಡಲೆ ತೆರವುಗೊಳಿಸಬೇಕು. ತಪ್ಪಿದಲ್ಲಿ ಜಿಲ್ಲಾಡಳಿತವೇ ಅವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ದೇಶಾದ್ಯಂತ ಸಾರ್ವಜನಿಕ ರಸ್ತೆ ಹಾಗೂ ಮುಖ್ಯರಸ್ತೆಗಳಲ್ಲಿ ನಿ"ಸಲಾಗಿರುವ ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸಮುದಾಯ ಭವನಗಳನ್ನು ಕೂಡಲೆ ತೆರವುಗೊಳಿಸುವಂತೆ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದೆ. ಆ "ನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆಯೊಂದನ್ನು ಹೊರಡಿಸಿ, ಅಕ್ರಮ ಕಟ್ಟಡಗಳನ್ನು ಗುರುತಿಸುವುದು ಸೇರಿದಂತೆ ಅವುಗಳನ್ನು ತೆರವುಗೊಳಿಸುವ ಕುರಿತು ಮಾರ್ಗಸೂಚಿಗಳನ್ನು ನೀಡಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿರುವ ದೇವಾಲಯ, ಮಸೀದಿ, ಚರ್ಚ್ ಹಾಗೂ ಸಮುದಾಯ ಭವನಗಳ ಪಟ್ಟಿಯನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ೧೭೦ ಕ್ಕೂ ಹೆಚ್ಚು ಅನಧಿಕೃತ ಕಟ್ಟಡ ಇರುವುದಾಗಿ ಪಟ್ಟಿ ಮಾಡಲಾಗಿದೆ. ಸಂಬಂಧಿಸಿದ ದೇವಸ್ಥಾನ, ಮಸೀದಿ, ಚರ್ಚ್ ಮಂಡಳಿಯರು ಅನಧಿಕೃತ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸಬೇಕು. ಒಂದು ವೇಳೆ ಸಂಬಂಧಿಸಿದ ಸ"ತಿಯವರು ಅನಧಿಕೃತವಾಗಿ ನಿ"ಸಿರುವ ಕಟ್ಟಡಗಳನ್ನು ನಿಗದಿಪಡಿಸಿದ ಅವಧಿಯಲ್ಲಿ ತೆರವುಗೊಳಿಸದೇ ಹೋದಲ್ಲಿ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ಏಕ ಕಾಲಕ್ಕೆ ಜಿಲ್ಲಾಡಳಿತ ವತಿಂದ ಜೆ.ಸಿ.ಬಿ. ಯಂತ್ರದ ಮೂಲಕ ತೆರವುಗೊಳಿಸಲಾಗುವುದು. ಸರ್ವೋಚ್ಛ ನ್ಯಾಯಾಲಯ ಇದೇ ಡಿಸೆಂಬರ್ ೩೦ ರ ಒಳಗೆ ದೇಶದ ಎಲ್ಲಾ ಕಡೆ ಇರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿದೆ. ಈ ಆದೇಶವನ್ನು ನಿಗದಿತ ಅವಧಿಯೊಳಗೆ ಪಾಲಿಸದೇ ಇದ್ದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸರ್ವೋಚ್ಛ ನ್ಯಾಯಾಲಯ ತೀರ್ಪಿನಲ್ಲಿ ಹೇಳಿದೆ. ಇಂತಹ ಪರಿಸ್ಥಿತಿಯಲ್ಲಿ ""ಧ ಕೋಮುಗಳ ಮುಖಂಡರು ಸಭೆ ನಡೆಸಿ ಅತಿಕ್ರಮಣ ಕಟ್ಟಡಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಜಿಲ್ಲಾಡಳಿತವೇ ಕ್ರಮ ಕೈಗೊಳ್ಳುವುದು. ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ಪಟ್ಟಿ ಮಾಡಬೇಕು. ಈ ಸಂಬಂಧ ಯಾವುದೇ ಆಕ್ಷೇಪಣೆಗಳು ಬಂದಲ್ಲಿ ಅವುಗಳಿಗೆ ಸಮರ್ಪಕ ಉತ್ತರ ನೀಡುವ ಜವಾಬ್ದಾರಿ ಆಯಾ ತಾಲೂಕು ತಹಸಿಲ್ದಾರರ ಮೇಲಿದೆ. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಎಸ್. ಸತ್ಯಮೂರ್ತಿಯವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಈಶ್ವರಚಂದ್ರ "ದ್ಯಾಸಾಗರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್. ಮೂರ್ತಿ, ಅಪರ ಜಿಲ್ಲಾಧಿಕಾರಿ ಬಿ. ಪಿ. ಅಡ್ನೂರ್, ಕೊಪ್ಪಳ ನಗರಸಭೆಯ ಪೌರಾಯುಕ್ತ ಎಚ್. ಬಿ. ಬೆಳ್ಳಿಕಟ್ಟಿ, ಗಂಗಾವತಿ ನಗರಸಭೆ ಪೌರಾಯುಕ್ತ ಬಸವರಾಜಪ್ಪ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಜಂಗಲ್, ಆಯಾ ತಾಲೂಕು ತಹಸಿಲ್ದಾರರು ಹಾಗೂ ಅನುಷ್ಠಾನ ಅಧಿಕಾರಿಗಳು ಸಭೆಯಲ್ಲಿ ಭಾಗವ"ಸಿದ್ದರು.
0 comments:
Post a Comment