ಕೊಪ್ಪಳ ಅ. : ಪ್ರಾಥಮಿಕ ಶಾಲಾ ಹೆಚ್ಚುವರಿ ಶಿಕ್ಷಕರನ್ನು ಜಿಲ್ಲೆಂದ ಹೊರಗೆ ಕಳಿಸದಂತೆ ತಡೆಹಿಡಿಯಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿ.ಪಂ. ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸರ್ಕಾರದ ನಿರ್ದೇಶನದಂತೆ ಶಾಲಾ ಮಕ್ಕಳ ಸಂಖ್ಯೆಗನುಗುಣವಾಗಿ ಶಿಕ್ಷಕರನ್ನು ನಿಯುಕ್ತಿಗೊಳಿಸಲಾಗುವುದು. ಹೆಚ್ಚುವರಿ ಶಿಕ್ಷಕರನ್ನು ಖಾಲಿ ಇರುವ ಹುದ್ದೆಗಳಿಗೆ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಬೇಕಾಗುವುದು. ಅದರಂತೆ ಶಿಕ್ಷಣ ಇಲಾಖೆ ಹೆಚ್ಚುವರಿ ಶಿಕ್ಷಕರ ಪಟ್ಟಿಯನ್ನು ತಯಾರಿಸಲಾಗಿದ್ದು, ಆ ಪ್ರಕಾರ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮರು ನೇಮಕದ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ನಂತರ ಜಿಲ್ಲೆಯೊಳಗೆ ಅಂತರ್ ತಾಲೂಕು ವರ್ಗಾವಣೆ ಕೈಗೊಳ್ಳಲಾಗುವುದು. ಇದನ್ನು ಮೀರಿ ಇನ್ನೂ ಹೆಚ್ಚಿನ ಹುದ್ದೆಗಳು ಹೆಚ್ಚುವರಿಯಾದಲ್ಲಿ ಅಂತಹ ಹುದ್ದೆಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೆ ಕ್ರಮ ಕೈಗೊಳ್ಳುವಂತೆ ಸರ್ಕಾರ ನಿರ್ದೇಶನ ನೀಡಿದೆ. ಜಿಲ್ಲೆಯಲ್ಲಿ ಹೆಚ್ಚುವರಿ ಆಗುವ ಪ್ರಾಥಮಿಕ ಶಿಕ್ಷಕರನ್ನು ಜಿಲ್ಲೆಂದ ಹೊರಗೆ ಕಳುಹಿಸಲಾಗುವುದಿಲ್ಲ ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದು ಜಿ.ಪಂ. ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್ ಅವರು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಸಭೆಯಲ್ಲಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಪ್ರಸಾದ್ ಅವರು, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು ೧೬೩೧೭೭ ಮಕ್ಕಳು ಪ್ರಾಥಮಿಕ ಶಾಲೆಯಲ್ಲಿ ದಾಖಲಾಗಿದ್ದಾರೆ. ಆದರೆ ಆ ಪೈಕಿ ೧೫೫೨೪೧ ಮಕ್ಕಳು ಮಾತ್ರ ಶಾಲೆಗೆ ಹಾಜರಾಗುತ್ತಿವೆ. ಈ ಹಾಜರಾತಿಗನುಗುಣವಾಗಿ ೧ : ೩೦ ಅನುಪಾತದಂತೆ ೩೦ ಮಕ್ಕಳಿಗೆ ಒಬ್ಬರು ಶಿಕ್ಷಕರ ಹುದ್ದೆಯನ್ನು ಲೆಕ್ಕ ಹಾಕಲಾಗುವುದು. ಅದರಂತೆ ೫೬೪೭ ಶಿಕ್ಷಕರು ಬೇಕಾಗುತ್ತಾರೆ. ಅದರಲ್ಲಿ ಜಿಲ್ಲೆಗೆ ೫೮೩೧ ಹುದ್ದೆಗಳು ಮಂಜೂರಾಗಿವೆ. ೫೧೩ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಲಾಗಿದ್ದು, ತಾಲೂಕು ಹಾಗೂ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೆಚ್ಚುವರಿ ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಿದಾಗಲೂ ಉಳಿದ ಶಿಕ್ಷಕರ ಹುದ್ದೆಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಭೆಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಜಿ.ಪಂ. ೦೫ ವರ್ಷಗಳ ಅವಧಿ ಪೂರ್ಣಗೊಳಿಸುವ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ೦೫ ವರ್ಷಗಳ ಪ್ರಗತಿ ಚಿತ್ರ ಬಿಂಬಿಸುವ ಸಾಕ್ಷ್ಯ ಚಿತ್ರ ತಯಾರಿಸುವುದು, ಹೈದ್ರಾಬಾದ್-ಕರ್ನಾಟಕ ವಿಮೋಚನೆಗೆ ಶ್ರಮಿಸಿದ ಅಂದಿನ ಕೇಂದ್ರ ಗೃಹ ಸಚಿವ ಸರ್ದಾರ್ ವಲ್ಲಭಾಯಿ ಪಟೇಲ್ ಹಾಗೂ ಕೊಪ್ಪಳ ಜಿಲ್ಲಾ ರಚನೆಗೆ ಕಾರಣಕರ್ತರಾದ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಜೆ.ಹೆಚ್. ಪಟೇಲ್ ಅವರ ಪ್ರತಿಮೆಗಳನ್ನು ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ಸ್ಥಾಪಿಸುವ ಸರ್ವಾನುಮತದ ನಿರ್ಣಯ ಕೈಗೊಳ್ಳಲಾತು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷ ಬಿ. ಬಸವರಾಜಪ್ಪ, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಚ್. ಮೂರ್ತಿ ಅಲ್ಲದೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಾ ಸಮಿತಿಗಳ ಅಧ್ಯಕ್ಷರು, ಗಣ್ಯರು ಭಾಗವಹಿಸಿದ್ದರು.
0 comments:
Post a Comment