ಕೊಪ್ಪಳ : ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕುರಿತಂತೆ ಹಲವಾರು ದೂರುಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ಕೂಡಲೆ ಯೋಜನೆಯನ್ನು ದೂರು, ದೋಷ ಮುಕ್ತತೆಯಿಂದ ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಸಂಸದ ಶಿವರಾಮಗೌಡ ಅವರು ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕುರಿತು ಹಲವಾರು ದೂರುಗಳು ಕೇಳಿ ಬರುತ್ತಿವೆ. ಕೊಪ್ಪಳ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಾತ್ರ ಯೋಜನೆಯಡಿ ಕಾರ್ಯನಿರ್ವಹಿಸಿದ ಫಲಾನುಭವಿಗಳಿಗೆ ಅಂಚೆ ಕಚೇರಿ ಮೂಲಕ ಹಣ ಪಾವತಿಸಲಾಗುತ್ತಿದೆ. ಇದನ್ನು ಮಧ್ಯವರ್ತಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಯ ನಿರ್ವಹಿಸಿದ ಫಲಾನುಭವಿಗಳಿಗೆ ಅಂಚೆ ಕಚೇರಿಯ ಬದಲಾಗಿ ಬ್ಯಾಂಕ್‌ಗಳ ಮೂಲಕ ಹಣ ಪಾವತಿಸುವುದಕ್ಕೆ ಕ್ರಮ ಕೈಗೊಳ್ಳಬೇಕು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದೇ ಇರುವುದು ಕಂಡು ಬಂದಿದ್ದು, ಇದು ಕಳವಳಕಾರಿಯಾಗಿದೆ. ಕೆಲಸ ಅರಸಿ ಬಂದವರಿಗೆ ಕೆಲಸ ನೀಡುವುದು ಗ್ರಾಮ ಪಂಚಾಯತಿ ಕರ್ತವ್ಯವಾಗಿರುತ್ತದೆ. ಯೋಜನೆಯಡಿ ಇದುವರೆಗೆ ಕಂಡು ಬಂದ ನ್ಯೂನತೆಗಳನ್ನು ಸರಿಪಡಿಸಿ ಸಮರ್ಪಕವಾಗಿ ಜಾರಿಗೊಳಿಸಬೇಕು. ತಪ್ಪದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಅವರ "ರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಶಿವರಾಮಗೌಡ ಅವರು ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಟಿ.ಪಿ. ದಂಡಿಗದಾಸರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ೨೦೮೬೯೮ ಕುಟುಂಬಗಳು ಹಾಗೂ ೬೭೯೧೭೭ ವ್ಯಕ್ತಿಗಳು ಉದ್ಯೋಗಕ್ಕಾಗಿ ಹೆಸರು ನೊಂದಾಸಿಕೊಂಡಿದ್ದಾರೆ. ೨೦೮೬೦೦ ಕುಟುಂಬಗಳು ಉದ್ಯೋಗ ಚೀಟಿ ಪಡೆದುಕೊಂಡಿವೆ. ೩೧೬೬ ಕುಟುಂಬಗಳಿಗೆ ಹಾಗೂ ೧೧೩೭೦ ವ್ಯಕ್ತಿಗಳಿಗೆ ಉದ್ಯೋಗ ನೀಡಿ ೪೩೦೫ ಮಾನವ ದಿನಗಳನ್ನು ಸೃಜಿಸಲಾಗಿದೆ. ಇದಕ್ಕಾಗಿ ಈವರೆಗೆ ೨೪೮೩. ೨೬೫ ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಈ ಮೊದಲು ೨೫ ಕೋಟಿ ರೂ. ಬಿಡುಗಡೆಯಾಗಿದ್ದು, ೨೪ ಕೋಟಿ ರೂ. ವ್ಯಯ ಮಾಡಲಾಗಿದೆ. ಕಳೆದ ತಿಂಗಳಲ್ಲಿ ಮತ್ತೆ ೧೦ ಕೋಟಿ ರೂ. ಬಿಡುಗಡೆಯಾಗಿದ್ದು, ಸಂಬಂಧಿಸಿದ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕ್ರಮಕ್ಕಾಗಿ ಬಿಡುಗಡೆ ಮಾಡಲಾಗಿದೆ. ಯೋಜನೆಯಡಿ ಯಾವುದೇ ತೊಂದರೆ ಬಾರದಂತೆ ಕ್ರಮ ಕೈಗೊಳ್ಳಲು ಮುಂಜಾಗ್ರತೆ ವಹಿಸಲಾಗಿದೆ ಎಂದು ಅವರು "ವರಿಸಿದರು.
ಇದೇ ಸಂದರ್ಭದಲ್ಲಿ ನಿರ್ಮಲ ಗ್ರಾಮ, ತೋಟಗಾರಿಕೆ, ಪಶುಸಂಗೋಪನೆ, ಸರ್ವಶಿಕ್ಷಣ ಅಭಿಯಾನ, ಜಲಾನಯನ, ಕೃ, ನಗರಸಭೆ, ಅರಣ್ಯ ಮುಂತಾದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಘವೇಂದ್ರ ಹಿಟ್ನಾಳ್, ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್. ಮೂರ್ತಿ,ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವ"ಸಿದ್ದರು.
ಉದ್ಯೋಗ ಖಾತ್ರಿ ಒಂದು ಅತ್ಯುತ್ತಮ ಯೋಜನೆ ಎಂಬುದರಲ್ಲಿ ಎರಡು ಮಾತಿಲ್ಲ. ಕೃಷಿ ಕೂಲಿಕಾರರ ಕೊರತೆಯನ್ನು ಉಲ್ಬಣಗಳಿಸುವದರಲ್ಲಿ ಮಹತ್ವದ ಕೊಡುಗೆ ನೀಡಿದೆ
ReplyDelete