PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಜ. - ಜಿಲ್ಲೆಯಲ್ಲಿ ಜ. ೨೩ ರಿಂದ ೨೬ ರವರೆಗೆ ಮೊದಲ ಹಂತದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಜಿಲ್ಲೆಯ ೨೦೦೧೦೪ ಮಕ್ಕಳು ಇದರ ಪ್ರಯೋಜನ ಪಡೆಯಲಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸ್ವಯಂಸೇವಾ ಸಂಸ್ಥೆಗಳು ರ್‍ಟ್ರಾಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಸಹಾಯಕ ಆಯುಕ್ತ ಶರಣಬಸಪ್ಪ ಅವರು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ಮೊದಲ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಜ. ೨೩ ರಿಂದ ೨೬ ರವರೆಗೆ ೦೪ ದಿನಗಳ ಕಾಲ ೦೫ ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ೨೦೦೧೦೪ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಆ ಪೈಕಿ ೧೬೨೪೯೧ ಮಕ್ಕಳು ಗ್ರಾಮಾಂತರ ಪ್ರದೇಶದವರಾಗಿದ್ದು, ೩೭೬೧೩ ಮಕ್ಕಳು ನಗರ ಪ್ರದೇಶದವರಾಗಿದ್ದಾರೆ. ಮಕ್ಕಳಿಗೆ ಪೋಲಿಯೋ ಹನಿ ನೀಡುವ ಸಲುವಾಗಿ ಒಟ್ಟು ೨೬೮೨೮೧ ಮನೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಜ. ೨೩ ರಂದು ಬೂತ್ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಒಟ್ಟು ೮೪೩ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜ. ೨೪ ರಿಂದ ೨೬ ರವರೆಗೆ ಮನೆ ಮನೆಗಳಿಗೆ ಭೇಟಿ ನೀಡಿ ಉಳಿಕೆ ಮಕ್ಕಳಿಗೆ ಪೋಲಿಯೋ ಹನಿ ನೀಡಲಾಗುವುದು. ಬಸ್ ನಿಲ್ದಾಣ, ರೈಲು ನಿಲ್ದಾಣ, ಸಂತೆ, ಜಾತ್ರೆಗಳಲ್ಲಿ "ಶೇಷ ಬೂತ್‌ಗಳನ್ನು ಸ್ಥಾಪಿಸಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಗುವುದು. ಪಾಲಕರು ೦೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಯೊಂದಿಗೆ ಶಿಕ್ಷಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಲಯನ್ಸ್, ರೋಟರಿ ಹಾಗೂ ಇತರೆ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಿ ಈ ರ್‍ಟ್ರಾಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಸರಿಯಾದ ರೀತಿಯಲ್ಲಿ ನಿರ್ವ"ಸಬೇಕು. ಕೆಲವೊಂದು ಲಸಿಕಾ ಕೇಂದ್ರಗಳು ಶಾಲೆಗಳಲ್ಲಿ ನಿಗದಿಪಡಿಸಿರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಶಾಲೆಯಲ್ಲಿ ಲಸಿಕಾ ಕೇಂದ್ರಕ್ಕಾಗಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ಗ್ರಾಮಗಳಲ್ಲಿ ಡಂಗುರ ಸಾರುವುದು ಹಾಗೂ ಘೋಷಣೆಗಳನ್ನು ಕೂಗುವ ಮೂಲಕ ಹೆಚ್ಚಿನ ಪ್ರಚಾರ ಒದಗಿಸಬೇಕು ಎಂದು ಸಹಾಯಕ ಆಯುಕ್ತ ಶರಣಬಸಪ್ಪ ಅವರು ಹೇಳಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ: ರಮೇಶ್ ಮೂಲಿಮನಿ ಅವರು ಪೋಲಿಯೋ ಕಾರ್ಯಕ್ರಮದ ರೂಪುರೇಷೆಗಳನ್ನು "ವರಿಸಿದರು. ಪ್ರತಿ ತಾಲೂಕಿಗೆ ಒಬ್ಬರಂತೆ ವೈದ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಸಿ.ಬಿ. ಬಸವರಾಜ್ ಅವರು ಹೇಳಿದರು.
ಜಿಲ್ಲಾ ಪಲ್ಸ್ ಪೋಲಿಯೋ ನೋಡಲ್ ಅಧಿಕಾರಿ ಡಾ: ನಾಗರಾಜ್ ಅವರು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆದು ಬಂದ ದಾರಿ ಕುರಿತು ವಿವರಿಸಿದರು.
ಸಭೆಯಲ್ಲಿ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ಕೆ. ಕ್ಯಾಲಕೊಂಡ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ: ಎಸ್.ಕೆ. ದೇಸಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ವಿ. ರಾಜೇಂದ್ರಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೈ.ಬಿ. ಶಿಂಧೆ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನಾಲ್ಕು ತಾಲೂಕುಗಳ ವೈದ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕೊಪ್ಪಳದ ಡಾ: ಕೆ.ಜಿ. ಕುಲಕರ್ಣಿ, ಇನ್ನರ್ವಿ ಲ್ ಕ್ಲಬ್ ಅಧ್ಯಕ್ಷೆ ರತ್ನ ಎಂ. ಪಾಟೀಲ್, ಡಾ: ರಾಧಾ ಕುಲಕರ್ಣಿ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವ"ಸಿದ್ದರು.

Advertisement

0 comments:

Post a Comment

 
Top