PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ - ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಮೈಸೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ 'ಜಾಗತೀಕರಣ : ವಿಜ್ಞಾನ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಅವಕಾಶಗಳು ಹಾಗೂ ಸವಾಲುಗಳು' ಎಂಬ ಕೇಂದ್ರ "ಷಯದಡಿ ಫೆ. ೧೨ ರಿಂದ ೨೦ ರೊಳಗೆ ಸೂಕ್ತವಾದ ೦೨ ದಿನಗಳ ಕಾಲ ಸಮ್ಮೇಳನ ಆಯೋಜಿಸಲು ಉದ್ದೇಶಿಸಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅಗಾಧ ಅನುಭವ ಮತ್ತು ಪಾಂಡಿತ್ಯವನ್ನು ಹೊಂದಿರುವ ತಜ್ಞರು ಮತ್ತು ಪರಿಣತರಿಂದ ವಿಶೇಷ ಉಪನ್ಯಾಸಗಳನ್ನು ಆಯೋಜಿಸಲಾಗುತ್ತಿದ್ದು, ಈ ಸಮ್ಮೇಳನಕ್ಕೆ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ, ಕಾಲೇಜುಗಳಿಂದ ಉಪನ್ಯಾಸಕರು/ ಪ್ರಾಧ್ಯಾಪಕರು, ವಿಜ್ಞಾನಿಗಳು, ಸರ್ಕಾರಿ, ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸುಮಾರು ೯೦೦ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಅಲ್ಲದೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಕರ್ನಾಟಕದ ಹಿರಿಯ ವಿಜ್ಞಾನಿಯೊಬ್ಬರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಇದೇ ಸಂದರ್ಭದಲ್ಲಿ ನೀಡಿ ಗೌರವಿಸಲಾಗುವುದು. ಈ ಸಮ್ಮೇಳನದಲ್ಲಿ ಭಾಗವಹಿಸಲು ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ. ಆಸಕ್ತಿಯುಳ್ಳ ವಿಜ್ಞಾನ ಲೇಖಕರು, ವಿವಿಧ ಇಲಾಖೆಗಳ ಅಧಿಕಾರಿಗಳು, ಉಪನ್ಯಾಸಕರು, ಅಧ್ಯಾಪಕರು, ವಿಜ್ಞಾನಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಹೆಸರು, ವೃತ್ತಿ, ಹುದ್ದೆ, ಇಲಾಖೆ, ವಿಳಾಸ, ದೂರವಾಣಿ/ಮೊಬೈಲ್ ಸಂಖ್ಯೆ ಮುಂತಾದ ಮಾಹಿತಿಯನ್ನು ಡಾ : ಹೆಚ್. ಹೊನ್ನೇಗೌಡ, ನಿರ್ದೇಶಕರು (ತಾಂತ್ರಿಕ), ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಹಾಗೂ ಸದಸ್ಯ ಕಾರ್ಯದರ್ಶಿ ಕ.ವಿ.ತಂ.ಅ., "ಜ್ಞಾನ ಭವನ, ನಂ. ೨೪/೨, ಬಿಡಿಎ ಕಾಂಪ್ಲೆಕ್ಸ್ ಹತ್ತಿರ, ೨೧ ನೇ ಮುಖ್ಯ ರಸ್ತೆ, ಬನಶಂಕರಿ ೦೨ ನೇ ಹಂತ, ಬೆಂಗಳೂರು- ೭೦, ದೂರವಾಣಿ ಸಂ : ೦೮೦- ೨೬೭೧೧೧೬೦,

Advertisement

0 comments:

Post a Comment

 
Top