ಕೊಪ್ಪಳ ಜ. ೨೦ : ಪ್ರತಿ ವರ್ಷದಂತೆ ಈ ಬಾರಿಯೂ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಪ್ರತಿ ವರ್ಷದಂತೆ ಈ ಸಲವೂ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ ೨೬ ರಂದು ಬೆಳಿಗ್ಗೆ ೦೯ ಗಂಟೆಗೆ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಸಹಕಾರ ಮತ್ತು ಕೃ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣ ಸಮಾರಂಭದಲ್ಲಿ ಪೊಲೀಸ್, ಎನ್.ಸಿ.ಸಿ., ಗೃಹರಕ್ಷಕ ದಳ, ಸ್ಕೌಟ್ಸ್, ಗೈಡ್ಸ್, ರ್‍ಟ್ರಾಯ ಸೇವಾದಳ ತಂಡಗಳು ಕವಾಯತು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರಗಳನ್ನು ಏರ್ಪಡಿಸಲಾಗುವುದು. ಕೊಪ್ಪಳ ತಹಸಿಲ್ದಾರ್ ಕಚೇರಿ ಆವರಣದಿಂದ ಸ್ತಬ್ಧ ಚಿತ್ರಗಳು ಜಿಲ್ಲಾ ಕ್ರೀಡಾಂಗಣಕ್ಕೆ ಹೊರಡಲಿವೆ. ಧ್ವಜವಂದನೆ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮಹನೀಯರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಧ್ವಜಾರೋಹಣದ ನಂತರ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಗುವುದು. ಈ ಎಲ್ಲ ಕಾರ್ಯಕ್ರಮಗಳ ಯಶಸ್ವಿಗಾಗಿ ಮೂರು ಉಪಸಮಿತಿಗಳನ್ನು ರಚಿಸಲಾಗಿದ್ದು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸ್ತಬ್ಧ ಚಿತ್ರಗಳ ಪ್ರದರ್ಶನ ಸಮಿತಿ ನೇಮಿಸಲಾಗಿದೆ. ಅದೇ ರೀತಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ವಿ. ರಾಜೇಂದ್ರಪ್ರಸಾದ್ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ ಸಹಾಯಕ ಆಯುಕ್ತ ಶರಣಬಸಪ್ಪ ಅವರ ನೇತೃತ್ವದಲ್ಲಿ ವೇದಿಕೆ ಸಮಿತಿ ರಚಿಸಲಾಗಿದೆ. ಅಂದು ಸಂಜೆ ಸಾರ್ವಜನಿಕ ಮೈದಾನದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ. ಗಣರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆಯಾ ಉಪಸಮಿತಿ ಅಧ್ಯಕ್ಷರು ಕೂಡಲೆ ಸಭೆ ಕರೆದು ನಗರದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರ ಸಹಕಾರ ಕೋರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು
0 comments:
Post a Comment