ಕೊಪ್ಪಳ ಮೇ. ೨೧ : ಭಯೋತ್ಪಾದನಾ ವಿರೋಧಿ ದಿನದ ನಿಮಿತ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜನಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿಗಳು ಪ್ರತಿಜ್ಞಾ ವಚನ ಸ್ವೀಕರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರೂ ಆದ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆಂದು ಈ ಮೂಲಕ ಶ್ರದ್ಧಾ ಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ, ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂಬ ಪ್ರತಿಜ್ಞಾ ವಚನವನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಉಪಾಧ್ಯಕ್ಷೆ ಸೀತಾ ಹಲಗೇರಿ, ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿಜ್ಞಾ ವಚನ ಸ್ವೀಕರಿಸಿದರು.

0 comments:
Post a Comment