ಕೊಪ್ಪಳ ಜೂ. : ಯಾವುದೇ ಸಂದರ್ಭದಲ್ಲಿ ಸಂಭವಿಸುವ ಅತಿವೃಷ್ಠಿ, ಪ್ರವಾಹ ಪರಿಸ್ಥಿತಿ ಸೇರಿದಂತೆ ಪ್ರಕೃತಿ ವಿಕೋಪವನ್ನು ಸಮರ್ಥವಾಗಿ ಎದುರಿಸಲು ಎಲ್ಲ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಜ್ಜಾಗಿರಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕಳೆದೆರಡು ವರ್ಷಗಳ ಹಿಂದೆ ಅತಿವೃಷ್ಠಿ ಹಾಗೂ ಪ್ರವಾಹದ ಕಾರಣದಿಂದ ಕೊಪ್ಪಳ ಜಿಲ್ಲೆಯಲ್ಲಿ ಸಾಕಷ್ಟು ಪ್ರಾಣಹಾನಿ, ಆಸ್ತಿ ಹಾನಿ ಹಾಗೂ ಬೆಳೆ ಹಾನಿ ಸಂಭವಿಸಿತ್ತು. ಈಗಾಗಲೆ ಮುಂಗಾರು ಪ್ರಾರಂಭವಾಗಿದ್ದು, ಯಾವುದೇ ಬಗೆಯ ನೈಸರ್ಗಿಕ ವಿಕೋಪ ಎದುರಿಸಲು ಈಗಿನಿಂದಲೆ ಜಿಲ್ಲಾಡಳಿತ ಸಜ್ಜುಗೊಳ್ಳಬೇಕಾಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸದಂತೆ ಕ್ರಮ ಕೈಗೊಳ್ಳುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದಲ್ಲಿ, ಹಾನಿಯ ಪ್ರಮಾಣ ತಂತಾನೆ ಕಡಿಮೆಗೊಳ್ಳಲಿದೆ. ಈಗಾಗಲೆ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿಯನ್ನು ತಯಾರಿಸಲಾಗುತ್ತಿದೆ. ಈ ಹಿಂದೆ ಸಂಭವಿಸಿದ ಪ್ರವಾಹ ಸಂದರ್ಭದಲ್ಲಿ ತೊಂದರೆ ಅನುಭವಿಸಿದ ಗ್ರಾಮಗಳ ಪೈಕಿ ಹಲವು ಗ್ರಾಮಗಳ ಸ್ಥಳಾಂತರ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವು ಗ್ರಾಮಗಳ ಸ್ಥಳಾಂತರವಾಗಬೇಕಾಗಿದೆ ಎಂದರು.
ಅತಿವೃಷ್ಠಿಯಿಂದ ಸಂತ್ರಸ್ಥರಾಗುವವರಿಗೆ ಆಹಾರ, ಕುಡಿಯುವ ನೀರು ಮತ್ತು ಸುರಕ್ಷಿತ ಆಶ್ರಯ ಒದಗಿಸುವುದು ಜಿಲ್ಲಾಡಳಿತದ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಪಡಿತರ ಚೀಟಿದಾರರಿಗೆ ಒದಗಿಸುವ ಆಹಾರಧಾನ್ಯ ಹಾಗೂ ಸೀಮೆಎಣ್ಣಿ ಪ್ರಮಾಣ ಹೊರತುಪಡಿಸಿ, ಸಾಕಷ್ಟು ಅಕ್ಕಿ, ಗೋಧಿ, ಸೀಮೆಎಣ್ಣೆಯನ್ನು ದಾಸ್ತಾನಿರಿಸಿಕೊಳ್ಳಬೇಕು. ಸಂತ್ರಸ್ಥರಿಗೆ ಸುರಕ್ಷಿತ ತಾಣವನ್ನಾಗಿ ಕಲ್ಯಾಣ ಮಂಟಪಗಳು, ಶಾಲೆಗಳು, ವಸತಿ ನಿಲಯಗಳನ್ನು ಬಳಸುವುದರಿಂದ, ಇವುಗಳ ಎಲ್ಲ ಮಾಹಿತಿ ಆಯಾ ತಾಲೂಕು ತಹಸಿಲ್ದಾರರು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾ.ಪಂ. ಕಾರ್ಯದರ್ಶಿಗಳು ಹಾಗೂ ಗ್ರಾಮ ಸಹಾಯಕರು ಇಟ್ಟುಕೊಂಡಿರಬೇಕು. ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಅಡುಗೆ ತಯಾರಕರ ಜವಾಬ್ದಾರಿ ಹೆಚ್ಚಾಗಿದ್ದು, ಸಂತ್ರಸ್ಥರಿಗೆ ಸಮರ್ಪಕವಾಗಿ ಅಡುಗೆ ಮಾಡಲು ಸಿದ್ಧರಿರಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ವೈದ್ಯರು, ಶುಶ್ರೂಷಕ ಸಿಬ್ಬಂದಿಯೊಂದಿಗೆ ಸಜ್ಜಾಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಜೀವರಕ್ಷಕ ಔಷಧಿಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅತಿವೃಷ್ಠಿಯ ಕಾರಣದಿಂದ ಸಂಪರ್ಕ ಕಡಿತಗೊಳ್ಳುವ ರಸ್ತೆಗಳು, ಸೇತುವೆಗಳು ಸೇರಿದಂತೆ ಇದಕ್ಕೆ ಪರ್ಯಾಯವಾಗಿರುವ ರಸ್ತೆಗಳನ್ನು ಗುರುತಿಸಿ, ಅಂತಹ ರಸ್ತೆಗಳು ಹಾಳಾಗಿದ್ದಲ್ಲಿ, ಕೂಡಲೆ ಆದ್ಯತೆ ಮೇರೆಗೆ ಅವುಗಳನ್ನು ದುರಸ್ತಿಗೊಳಿಸುವ ಕಾರ್ಯವಾಗಬೇಕು. ಅಂತಹ ರಸ್ತೆ, ಸೇತುವೆ, ಪರ್ಯಾಯ ರಸ್ತೆಗಳ ಸಮೀಕ್ಷೆ ನಡೆಸಿ, ಒಂದು ವಾರದೊಳಗಾಗಿ ವರದಿ ಸಲ್ಲಿಸಬೇಕು. ರಸ್ತೆಗಳ ಮೇಲೆ ಮರ,ಗಿಡಗಳು ಬಿದ್ದು ರಸ್ತೆ ಸಂಚಾರ ವ್ಯತ್ಯಯವಾದಲ್ಲಿ ಅರಣ್ಯ ಇಲಾಖೆಯವರನ್ನು ಕಾಯದೆ, ಕೂಡಲೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹದಿಂದ ತೊಂದರೆಗೀಡಾದವರನ್ನು ರಕ್ಷಿಸಲು ಮೋಟಾರ್ ಬೋಟ್‌ಗಳು ಅತ್ಯಂತ ಅವಶ್ಯಕ ಸಾಧನವಾಗಿದ್ದು, ಮೋಟಾರ್ ಬೋಟ್‌ಗಳನ್ನು ಸುಸ್ತಿತಿಯಲ್ಲಿ ಸಿದ್ಧವಾಗಿಟ್ಟುಕೊಂಡು, ಅವುಗಳನ್ನು ಯಾವುದೇ ಸಂದರ್ಭದಲ್ಲಿ ಬಳಸಲು ಅವು ಯೋಗ್ಯವಾಗಿರುವಂತೆ ಸಂಬಂಧಪಟ್ಟ ಅಧಿಕಾರಿಗಳು ಸಜ್ಜುಗೊಳಿಸಿ ಇಡಬೇಕು. ದೂರವಾಣಿ, ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾದಲ್ಲಿ, ಸಂಪರ್ಕ ಸಾಧನವನ್ನಾಗಿ ಪೊಲೀಸ್ ಇಲಾಖೆಯ ವೈರ್‌ಲೆಸ್ ಸೌಲಭ್ಯವನ್ನು ಬಳಸುವುದು ಸೂಕ್ತ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಭಾಗವಹಿಸಿದ್ದ ಸಹಾಯಕ ಆಯುಕ್ತ ಶರಣಬಸಪ್ಪ ಅವರು ಮಾತನಾಡಿ ಕಳೆದೆರಡು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯ ಕಾರಣದಿಂದ ಜಿಲ್ಲೆಯಲ್ಲಿ ಬಹಳಷ್ಟು ಹಾನಿ ಸಂಭವಿಸಿತ್ತು. ಆದುದರಿಂದ ಎಲ್ಲ ಅಧಿಕಾರಿಗಳು ಹಾನಿಯ ಪ್ರಮಾಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಿನಿಂದಲೇ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕವಿಟ್ಟುಕೊಂಡು ವಿಪತ್ತು ನಿರ್ವಹಣೆಯಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಕೆ. ತೊರವಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪನಿರ್ದೇಶಕ ಅಶೋಕ್ ಕಲಘಟಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿ.ಬಿ. ಬಸವರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೆ.ವಿ. ಕ್ಯಾಲಕೊಂಡ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಕೊಪ್ಪಳ ತಹಸಿಲ್ದಾರ್ ಬಿ.ಎಲ್. ಘೋಟೆ, ಜಿಲ್ಲಾಧಿಕಾರಿಗಳ ಕಚೇರಿಯ ಪಟ್ಟಣಶೆಟ್ಟಿ, ವಿರೂಪಾಕ್ಷರಾವ್ ಅವರು ಭಾಗವಹಿಸಿ, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

0 comments:
Post a Comment