ಕೊಪ್ಪಳ ಜೂ. : ಇದೇ ಜೂ. ೨೫ ಮತ್ತು ೨೬ ರಂದು ಎರಡು ದಿನಗಳ ಕಾಲ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಕೂಟ ನಡೆಸಲು ದಿನಾಂಕ ನಿಗದಿಪಡಿಸಲಾಗಿದ್ದು, ಕೊಪ್ಪಳದ ಜಿಲ್ಲಾ ಕ್ರೀಡಾಂಗಣ ಅಥವಾ ಮುನಿರಾಬಾದ್‌ನಲ್ಲಿ ನಡೆಸುವ ಕುರಿತು ಸ್ಥಳ ಪರಿಶೀಲನೆ ಮಾಡಿ ಅಭಿಪ್ರಾಯ ಮಂಡಿಸುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಕ್ರೀಡಾಕೂಟದ ಆಯೋಜಕರಿಗೆ ಸೂಚನೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಕೂಟ ನಡೆಸುವ ಕುರಿತಂತೆ ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೂ. ೨೫, ೨೬ ರಂದು ಎರಡು ದಿನಗಳ ಕಾಲ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಸುವ ತೀರ್ಮಾನಕ್ಕೆ ಬರಲಾಗಿದ್ದು, ಈ ಬಾರಿಯ ಸರ್ಕಾರಿ ನೌಕರರ ಕ್ರೀಡಾಕೂಟ ಅತ್ಯಂತ ವ್ಯವಸ್ಥಿತವಾಗಿ ಜರುಗಬೇಕು. ಕ್ರೀಡಾಕೂಟವನ್ನು ಕೊಪ್ಪಳದ ಜಿಲ್ಲಾ ಕ್ರೀಡಾಂಗಣ ಅಥವಾ ಮುನಿರಾಬಾದ್‌ನಲ್ಲಿ ನಡೆಸುವ ಕುರಿತು ಸ್ಥಳ ಪರಿಶೀಲನೆ ಮಾಡಿ ಅಭಿಪ್ರಾಯ ಸಲ್ಲಿಸಲು ಸರ್ಕಾರಿ ನೌಕರರ ಕ್ರೀಡಾ ಕೂಟದ ಆಯೋಜಕರಿಗೆ ತಿಳಿಸಿದರು. ಪ್ರತಿ ಸಲ ಕೊಪ್ಪಳ ನಗರದಲ್ಲಿಯೇ ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಸುತ್ತಾ ಬಂದಿದ್ದು, ಈ ಬಾರಿ ಮುನಿರಾಬಾದ್‌ನ ಪ್ರಾಥಮಿಕ ಶಾಲೆ ಆವರಣದಲ್ಲಿ ಅಥ್ಲೆಟಿಕ್ಸ್, ಕ್ರಿಕೆಟ್, ವಾಲಿಬಾಲ್ ಸೇರಿದಂತೆ ಹೊರಾಂಗಣ ಕ್ರೀಡೆಗಳು ಹಾಗೂ ಸಂಗೀತ ಸ್ಪರ್ಧೆ, ಚೆಸ್, ಕೇರಂ ಸೇರಿದಂತೆ ವಿವಿಧ ಒಳಾಂಗಣ ಕ್ರೀಡೆಗಳನ್ನು ಪಂಪಾವನದ ಸುಂದರ ಪರಿಸರದಲ್ಲಿ ಏರ್ಪಡಿಸುವುದು ಸೂಕ್ತ. ಈ ಬಾರಿಯ ಕ್ರೀಡಾಕೂಟದ ಮನರಂಜನೆಯನ್ನು ಸರ್ಕಾರಿ ನೌಕರರೂ ಸೇರಿದಂತೆ ಅವರ ಕುಟುಂಬ ವರ್ಗವೂ ಸಹ ಪಾಲ್ಗೊಂಡು ಸವಿಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಭಾಗವಹಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ ಅವರು ಮಾತನಾಡಿ, ಕ್ರೀಡಾಕೂಟದ ಉದ್ಘಾಟನೆಗೆ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಎಸ್ ಸವದಿ ಅವರನ್ನು ಆಹ್ವಾನಿಸಲಾಗುವುದು. ಅಲ್ಲದೆ ಸಂಸದ ಶಿವರಾಮಗೌಡ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ ಸೇರಿದಂತೆ ಎಲ್ಲ ಶಾಸಕರುಗಳನ್ನು ಆಹ್ವಾನಿಸಲಾಗುವುದು. ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಲಾಸ್ ಘಾಡಿ ಅವರಿಗೆ ಜವಾಬ್ದಾರಿ ನೀಡಲಾಗುವುದು ಎಂದರು.
ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ನಾಗರಾಜ್, ಶರಣಬಸನಗೌಡ, ಬಿ.ಎಫ್. ಬೀರನಾಯ್ಕರ್, ವಿ.ಎನ್. ಘಾಡಿ, ದೈಹಿಕ ಶಿಕ್ಷಣ ಅಧಿಕಾರಿ ಸುದರ್ಶನ್ ಮುಂತಾದವರು ಭಾಗವಹಿಸಿದ್ದರು.
ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಮುನಿರಾಬಾದ್‌ಗೆ ತೆರಳಿದ ತಂಡ, ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾ ಕೂಟ ಆಯೋಜನೆಗಾಗಿ ಪ್ರಾಥಮಿಕ ಶಾಲಾ ಮೈದಾನ, ಪಂಪಾವನದ ಒಳಾಂಗಣದಲ್ಲಿ ಸಂಚರಿಸಿ, ಸ್ಥಳ ಪರಿಶೀಲನೆ ನಡೆಸಿತು. ಸ್ಥಳ ಪರಿಶೀಲನಾ ತಂಡದ ನೇತೃತ್ವವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ ಅವರು ವಹಿಸಿದ್ದರು. ಯುವಜನ ಸೇವಾ ಮತ್ತು ಕ್ರೀಡಾಇಲಾಖೆ ಅಧಿಕಾರಿ ವಿಲಾಸ್ ಘಾಡಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ., ಕಾಸಿಂಸಾಬ ಸಂಕನೂರು, ಎನ್.ಎಸ್. ಪಾಟೀಲ್ ಮುಂತಾದವರು ಈ ಸಂದರ್ಭದಲ್ಲಿ ಪಾಲ್ಗೊಂಡು ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

0 comments:
Post a Comment