ಕೊಪ್ಪಳ ಜೂ. : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ (ಸಪ್ಲಿಮೆಂಟರಿ) ಇದೇ ಜೂ. ೧೫ ರಿಂದ ೨೨ ರವರೆಗೆ ನಡೆಯಲಿದ್ದು, ಪರೀಕ್ಷೆಯು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಜಾರಿಗೊಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಸಪ್ಲಿಮೆಂಟರಿ ಪರೀಕ್ಷೆಗಳು ಜಿಲ್ಲೆಯಲ್ಲಿ ಜೂ. ೧೫ ರಿಂದ ಜೂ. ೨೨ ರವರೆಗೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ಹಾಗೂ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಜೂ. ೧೫ ರಂದು ಬೆಳಿಗ್ಗೆ ೬ ಗಂಟೆಯಿಂದ ಜೂ. ೨೨ ರಂದು ಸಾಯಂಕಾಲ ೦೬ ಗಂಟೆಯವರೆಗೆ ಪರೀಕ್ಷಾ ದಿನಗಳಂದು, ಪರೀಕ್ಷಾ ಕೇಂದ್ರಗಳ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ತರಹದ ಜೆರಾಕ್ಸ್, ಕಂಪ್ಯೂಟರ್, ಮೊಬೈಲ್, ಫ್ಯಾಕ್ಸ್‌ಗಳ ಬಳಕೆ ಮಾಡುವಂತಿಲ್ಲ, ಅಲ್ಲದೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡುವುದು, ಸಾರ್ವಜನಿಕರ ಸಭೆ, ವಿಜಯೋತ್ಸವ ಹಾಗೂ ಪ್ರತಿಭಟನೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

0 comments:
Post a Comment