ಕೊಪ್ಪಳ ಜೂ. : ಕೊಪ್ಪಳ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆ ಜೂ. ೨೭ ರಿಂದ ಜುಲೈ ೬ ರವರೆಗೆ ಜಿಲ್ಲೆಯ ೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಗಳು ಜಿಲ್ಲೆಯ ೬ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ. ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಪ.ಪೂ. ಕಾಲೇಜು, ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು, ಯಲಬುರ್ಗಾದ ಸರ್ಕಾರಿ ಪ.ಪೂ. ಕಾಲೇಜು, ಕುಷ್ಟಗಿಯ ಬಾಲಕರ ಸರ್ಕಾರಿ ಪ.ಪೂ. ಕಾಲೇಜು, ಗಂಗಾವತಿಯ ಬಾಲಕರ ಸರ್ಕಾರಿ ಪ.ಪೂ. ಕಾಲೇಜು (೨ ಕೇಂದ್ರ) ಪರೀಕ್ಷಾ ಕೇಂದ್ರಗಳಾಗಿವೆ. ಪರೀಕ್ಷೆಯಲ್ಲಿ ನಕಲು ತಡೆಗಟ್ಟಲು ಜಾಗೃತ ದಳ ರಚಿಸಲಾಗಿದೆ. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ೨೦೦ ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ ೬ ಗಂಟೆಯಿಂದ ಸಂಜೆ ೬ ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಇದರನ್ವಯ ಪರೀಕ್ಷಾ ಕೇಂದ್ರದ ೨೦೦ ಮೀ. ಸುತ್ತ ಯಾವುದೇ ಜೆರಾಕ್ಸ್, ಕಂಪ್ಯೂಟರ್ ಕೇಂದ್ರಗಳನ್ನು ನಿಷೇಧಿಸಿದೆ. ಅಲ್ಲದೆ ಸಾರ್ವಜನಿಕರು ಯಾವುದೇ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವುದು, ಸಾರ್ವಜನಿಕರ ಸಭೆ, ವಿಜಯೋತ್ಸವ, ಹಾಗೂ ಪ್ರತಿಭಟನೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಎಂದು ಪ್ರಕಟಣೆ ತಿಳಿಸಿದೆ.

0 comments:
Post a Comment