ಕೊಪ್ಪಳ ಜು. ೮ : ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಅಗತ್ಯ ಕ್ರಮ ಹಾಗೂ ಉದ್ಭವಿಸಬಹುದಾದ ಸಮಸ್ಯೆಗಳ ಕುರಿತು ಬಾಲ್ಯ ವಿವಾಹ ತಡೆ ಕೋರ್ ಕಮಿಟಿ ಅಧ್ಯಕ್ಷರಾದ ನ್ಯಾಯಮೂರ್ತಿ ಡಾ: ಶಿವರಾಜ್ ವಿ. ಪಾಟೀಲ್ ಅವರು ಜು. ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಪ್ಪಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು.
ಬಾಲ್ಯ ವಿವಾಹ ತಡೆ ಕೋರ್ ಕಮಿಟಿ ಅಧ್ಯಕ್ಷರಾದ ನ್ಯಾಯಮೂರ್ತಿ ಡಾ: ಶಿವರಾಜ್ ವಿ. ಪಾಟೀಲ್ ಅವರು ಜು. ೧೧ ರಂದು ಬೆಳಿಗ್ಗೆ ೧೧ ಗಂಟೆಗೆ ಎನ್.ಐ.ಸಿ. ಕೇಂದ್ರದ ಮೂಲಕ ವಿಡಿಯೋ ಕಾನ್ಫರೆನ್ಸ್ ನಡೆಸಿಕೊಡಲಿದ್ದು, ಇದರಲ್ಲಿ ಬಾಲ್ಯ ವಿವಾಹ ತಡೆಗಟ್ಟುವ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಈ ಸಂಬಂಧದ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಜಿಲ್ಲಾ ಎನ್.ಐ.ಸಿ. ಕೇಂದ್ರದಲ್ಲಿ ನಡೆಯುವ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಾದ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾ ವಾರ್ತಾಧಿಕಾರಿಗಳು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸಿಲ್ದಾರರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಕಾರ್ಮಿಕ ನಿರೀಕ್ಷಕರು, ಆರಕ್ಷಕ ನಿರೀಕ್ಷಕರು, ತಾಲೂಕುಗಳ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರು, ಜಿಲ್ಲಾ ನೋಂದಣಾಧಿಕಾರಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮುಖ್ಯಸ್ಥರು, ಹುಲಿಗಿ ದೇವಸ್ಥಾನದ ಕಾರ್ಯಕಾರಿ ಸಮಿತಿ ಮುಖ್ಯಸ್ಥರು, ರೋಟರಿ, ಲಯನ್ಸ್ ಕ್ಲಬ್ ಮುಖ್ಯಸ್ಥರು, ಜಿಲ್ಲಾ ಎನ್.ಐ.ಸಿ. ಕೇಂದ್ರದಲ್ಲಿ ತಪ್ಪದೆ ಹಾಜರಿರಬೇಕು. ಅಲ್ಲದೆ ಬಾಲ್ಯ ವಿವಾಹ ತಡೆಗಟ್ಟುವಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾ ಯುನಿಸೆಫ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಮನ್ವಯತೆಯಿಂದ ಅದೇ ದಿನದಂದು ನಡೆಯುವ ಕಾರ್ಯಾಗಾರದಲ್ಲಿ ಬಾಲ್ಯ ವಿವಾಹಕ್ಕೆ ತುತ್ತಾದ ೧೦ ರಿಂದ ೧೮ ವರ್ಷದೊಳಗಿನ ಹೆಣ್ಣು ಮಕ್ಕಳೊಂದಿಗೆ ತಪ್ಪದೆ ಹಾಜರಿರುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
0 comments:
Post a Comment