ಕೊಪ್ಪಳ. ಜು. ೧೦: ಕೊಪ್ಪಳ ನಗರಸಭೆ ವ್ಯಾಪ್ತಿಯ ಗುನ್ನಳ್ಳಿ ಹಾಗೂ ಹೊರತಟ್ನಾಳ ಮತ್ತು ಹೂವಿನಾಳ ಗ್ರಾಮಗಳಲ್ಲಿನ ನೂತನ ಆಶ್ರಯ ಬಡಾವಣೆ ಕಾಮಗಾರಿಗೆ ಶಂಕುಸ್ಥಾಪನೆ ಸಮಾರಂಭ ಜು. ೧೧ ರಂದು ಮಧ್ಯಾಹ್ನ ೩ ಗಂಟೆಗೆ ಹೂವಿನಾಳ ರಸ್ತೆಯ ಹಮಾಲರ ಕಾಲೋನಿ ಬಳಿ ನಡೆಯಲಿದೆ.
ರಾಜ್ಯ ವಸತಿ ಸಚಿವ ವಿ. ಸೋಮಣ್ಣ ಅವರು ಆಶ್ರಯ ಬಡಾವಣೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ವಹಿಸುವರು. ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಡಾ: ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ ವಲ್ಲ್ಯಾಪುರ, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ್, ಶಿವರಾಜ ಎಸ್ ತಂಗಡಗಿ, ಶಶಿಲ್ ಜಿ. ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ತಾಲೂಕಾ ಪಂಚಾಯತಿ ಅಧ್ಯಕ್ಷ ಅಮರೇಶ ಉಪಲಾಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಳಕಪ್ಪ ಜಾಧವ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ಉಪಾಧ್ಯಕ್ಷ ಅಮ್ಜದ್ ಪಟೇಲ್, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ನಗರಸಭೆ ಪೌರಾಯುಕ್ತ ಆನಂದ ವೈ ಕಾಂಬಳೆ ಅವರು ತಿಳಿಸಿದ್ದಾರೆ.
Home
»
»Unlabelled
» ಜು. ೧೧ ರಂದು ಆಶ್ರಯ ಬಡಾವಣೆ ಕಾಮಗಾರಿಗೆ ಶಂಕುಸ್ಥಾಪನೆ
Subscribe to:
Post Comments (Atom)
0 comments:
Post a Comment