ಕೊಪ್ಪಳ ಜು. : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜು. ೧೫ ಹಾಗೂ ೧೬ ರವರೆಗೆ ಎರಡು ದಿನಗಳ ಕಾಲ ಕೊಪ್ಪಳದ ಸಾಹಿತ್ಯ ಭವನದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲಾ ಪ್ರತಿಭೋತ್ಸವ ಕಾರ್ಯಕ್ರಮದಡಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ರಂಗೋಲಿ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು, ಈ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ಜು. ೧೫ ರಂದು ಬೆಳಿಗ್ಗೆ ೯-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ ಅವರು ಉದ್ಘಾಟನೆ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಎಚ್.ಎಸ್. ಪಾಟೀಲ್ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ನಿವೃತ್ತ ಜಿಲ್ಲಾ ವಾರ್ತಾಧಿಕಾರಿ ಬಸವರಾಜ ಆಕಳವಾಡಿ, ಜಿಲ್ಲಾ ವಾರ್ತಾಧಿಕಾರಿ ತುಕಾರಾಂ ರಾವ್ ಬಿ.ವಿ. ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಕೊಪ್ಪಳ ತಾಲೂಕು ಘಟಕದ ಅಧ್ಯಕ್ಷ ಜಿ.ಎಸ್. ಗೋನಾಳ್ ಅವರು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ ಅವರು ತಿಳಿಸಿದ್ದಾರೆ.

0 comments:
Post a Comment