ಕೊಪ್ಪಳ ಜು.: ಕೊಪ್ಪಳ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಜು. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ನಡೆಯಲಿದೆ.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ಆಯುಷ್ ಇಲಾಖೆ, ಜಿಲ್ಲಾ ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯ, ಎನ್.ಸಿ.ಸಿ., ಎನ್.ಎಸ್.ಎಸ್. ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಡಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಸಮಾರಂಭ ಜು. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಸಮಾರಂಭ ಉದ್ಘಾಟಿಸುವರು. ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನಿಲ್ ವಲ್ಲ್ಯಾಪುರ, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಬಯ್ಯಾಪುರ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ, ಶಿವರಾಜ ತಂಗಡಗಿ, ಹಾಲಪ್ಪ ಆಚಾರ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಶಶಿಲ್ ನಮೋಶಿ, ಜಿ.ಪಂ. ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ತಾ.ಪಂ. ಉಪಾಧ್ಯಕ್ಷ ಅಮರೇಶ ಉಪಲಾಪುರ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಳಕಪ್ಪ ಜಾಧವ್, ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯ ಪ್ರಾಚಾರ್ಯ ಅಲ್ಲಮಪ್ರಭು ಬೆಟ್ಟದೂರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಎಸ್.ಜಿ. ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ಎ.ಆರ್. ಲೋಕಾಪುರ ಅವರು ವಿಶೇಷ ಉಪನ್ಯಾಸಕರಾಗಿ ಭಾಗವಹಿಸುವರು, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿ.ಬಿ. ಬಸವರಾಜ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿರುವರು.
ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜು. ೩೦ ರಂದು ಬೆಳಿಗ್ಗೆ ೮-೩೦ ಗಂಟೆಗೆ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದಿಂದ ವಿಶೇಷ ಜನಜಾಗೃತಿ ರ್‍ಯಾಲಿ ನಡೆಯಲಿದ್ದು, ಸರ್ವರೂ ಈ ರ್‍ಯಾಲಿಯಲ್ಲಿ ಭಾಗವಹಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
0 comments:
Post a Comment