ಕೊಪ್ಪಳ ಜು. ೮ : ಗಂಗಾವತಿಯಲ್ಲಿ ೨೦೧೧ ರ ನವೆಂಬರ್ ೧೮, ೧೯ ಮತ್ತು ೨೦ ರಂದು ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆಯನ್ನು ರಾಜ್ಯ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಲ್ಲೂರು ಪ್ರಸಾದ್ ಅವರು ತಿಳಿಸಿದ್ದಾರೆ.
ಗಂಗಾವತಿಯ ಎ.ಪಿ.ಎಂ.ಸಿ. ಆವರಣದಲ್ಲಿ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧಿಕೃತ ಲಾಂಛನ ಬಿಡುಗಡೆ ಹಾಗೂ ಸಮ್ಮೇಳನದ ಸ್ವಾಗತ ಸಮಿತಿಯ ಕಚೇರಿ ಉದ್ಘಾಟನೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ಸಾಹಿತ್ಯ ಸಮ್ಮೇಳನಗಳು ಕನ್ನಡ ನಾಡನ್ನು ಕಟ್ಟುವ ಕಾರ್ಯದಲ್ಲಿ ಪೂರಕವಾಗಿದ್ದು, ಎಲ್ಲಾ ಸಾಹಿತ್ಯಾಸಕ್ತರು, ಕನ್ನಡದ ನುಡಿ ಹಬ್ಬಕ್ಕೆ ಸ್ವಯಂ ಪ್ರೇರಿತರಾಗಿ ಶ್ರಮಿಸುವ ಅಗತ್ಯವಿದೆ. ಪ್ರತಿ ಸಮ್ಮೇಳನದಲ್ಲೂ ಹೊಸತನವನ್ನು ಅಳವಡಿಸಲಾಗುತ್ತಿದ್ದು, ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಚಟುವಟಿಕೆಗಳ ಜೊತೆಗೆ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲಾಗುವುದು. ಸಮ್ಮೇಳನದಲ್ಲಿ ಉಂಟಾಗುವ ಸಣ್ಣ ಪುಟ್ಟ ದೋಷಗಳಿಗೆ ಮಾಧ್ಯಮಗಳು ಹೆಚ್ಚಿನ ಮಹತ್ವ ನೀಡಬಾರದು. ಅರ್ಥಪೂರ್ಣ ಸಮ್ಮೇಳನ ಆಚರಣೆಗೆ ಮಾಧ್ಯಮಗಳ ಸಹಕಾರ ಅಗತ್ಯವಾಗಿದೆ. ಈ ಹಿಂದಿನ ಸಮ್ಮೇಳನಗಳು ತೆಗೆದುಕೊಂಡಿರುವ ನಿರ್ಣಯಗಳ ಪೈಕಿ ಕೆಲವನ್ನು ಮಾತ್ರ ಸರ್ಕಾರ ಜಾರಿಗೊಳಿಸಿದ್ದು, ಆದರೆ ಹಲವಾರು ನಿರ್ಣಯಗಳ ಜಾರಿಗೆ ಸರ್ಕಾರ ಮುಂದಾಗಿಲ್ಲ. ಸಮ್ಮೇಳನದ ನಿರ್ಣಯಗಳು ಕನ್ನಡಿಗರ ಆಶಯದ ಧ್ವನಿಯಾಗಿದ್ದು, ಅದಕ್ಕೆ ಮನ್ನಣೆ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ನಡೆಸುವ ಸಲುವಾಗಿ ರಾಜ್ಯದ ೧೭೫ ತಾಲೂಕುಗಳಿಗೆ ತಲಾ ೫೦ ಸಾವಿರ ರೂ.ಗಳ ಅನುದಾನವನ್ನು ಒದಗಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನಗಳ ಜೊತೆಗೆ ವಚನ ಸಾಹಿತ್ಯ ಹಾಗೂ ದಾಸ ಸಾಹಿತ್ಯಕ್ಕೂ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಲ್ಲೂರು ಪ್ರಸಾದ್ ಅವರು ಹೇಳಿದರು.
ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ, ಸಂಸದ ಶಿವರಾಮಗೌಡ, ಕಸಾಪ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್, ಕಸಾಪ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಬಿ. ಮಂಜುನಾಥ್, ಎಪಿಎಂಸಿ ಅಧ್ಯಕ್ಷ ಅಮರೇಗೌಡ ಪೋ. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.
೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ವೈಶಿಷ್ಟ್ಯಪೂರ್ಣ ಲಾಂಛನ ಬಿಡುಗಡೆ
ಕೊಪ್ಪಳ ಜು. : ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ೨೦೧೧ ರ ನವೆಂಬರ್ ೧೮ ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿರುವ ೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧಿಕೃತ ಲಾಂಛನವನ್ನು ಕಸಾಪ ರಾಜ್ಯಾಧ್ಯಕ್ಷ ನಲ್ಲೂರು ಪ್ರಸಾದ್ ಅವರು ಶನಿವಾರ ಬಿಡುಗಡೆ ಮಾಡಿದರು.
ಕೊಪ್ಪಳ ಜಿಲ್ಲೆಯ ಕಲೆ, ಅಭಿವೃದ್ಧಿ, ಸಂಸ್ಕೃತಿ, ಪ್ರಕೃತಿ ಸೌಂದರ್ಯವನ್ನು ಮೇಳೈಸಿರುವ ವೈಶಿಷ್ಟ್ಯಪೂರ್ಣವನ್ನು ಬಿಂಬಿಸುವ ೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಇದಾಗಿದ್ದು, ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಕೊಪ್ಪಳ ಜಿಲ್ಲೆಯಾಗಿದೆ ಎಂಬುದನ್ನು ಇದು ಬಿಂಬಿಸುತ್ತದೆ. ಲಾಂಛನವು ವಿಜಯನಗರ ಸಾಮ್ರಾಜ್ಯದ ಕಲ್ಲಿನ ತೇರು, ಆನೆಗೊಂದಿಯ ಹುಚ್ಚಪ್ಪಯ್ಯನ ಮಂಟಪದ ಸುಂದರ ಕಲೆಯನ್ನು ಒಳಗೊಂಡಿದ್ದರೆ, ಉತ್ತರ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯ ಜಿಲ್ಲೆಯ ಅಭಿವೃದ್ಧಿಯನ್ನು ಪ್ರತಿನಿಧಿಸುತ್ತದೆ. ಇದಲ್ಲದೆ ದೇವಾಲಯಗಳ ಚಕ್ರವರ್ತಿ ಎನಿಸಿಕೊಂಡಿರುವ ಕೊಪ್ಪಳ ಜಿಲ್ಲೆ ಇಟಗಿಯ ದೇವಾಲಯವನ್ನೂ ಸಹ ಲಾಂಛನದಲ್ಲಿ ಬಳಸಿಕೊಳ್ಳಲಾಗಿದ್ದು, ಕೊಪ್ಪಳದ ಕೋಟೆ ಹಾಗೂ ಗುಡ್ಡ, ಈ ಭಾಗದ ಇತಿಹಾಸ ಹಾಗೂ ಪ್ರಕೃತಿ ಸೌಂದರ್ಯವನ್ನು ಬಿಂಬಿಸುತ್ತದೆ. ರಾಯಚೂರಿನ ಕಲಾವಿದ ಕೃಷ್ಣ ಅವರು ಈ ಲಾಂಛನವನ್ನು ರಚಿಸಿದ್ದು, ನಿಜಕ್ಕೂ ಈ ಲಾಂಛನ ಸಮ್ಮೇಳನಕ್ಕೆ ಅರ್ಥಪೂರ್ಣವಾಗಿದೆ ಎನ್ನುತ್ತಾರೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ್ ಅವರು.

0 comments:
Post a Comment