PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಜು. ೮ : ಭಾರತ ಸರ್ಕಾರ ಪ್ರತಿಯೊಬ್ಬ ನಾಗರೀಕರಿಗೂ ವಿಶಿಷ್ಟ ಗುರುತಿನ ಸಂಖ್ಯೆ ನೀಡುವ ಆಧಾರ್ ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆ ಕುರಿತಂತೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜು. ೧೩ ರಂದು ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ಆಧಾರ್ ಯೋಜನೆಯ ಅನುಷ್ಠಾನ ಕುರಿತಂತೆ ತಾಲೂಕು ಕೇಂದ್ರಗಳಲ್ಲಿ ಜು. ೧೩ ರಂದು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಕೊಪ್ಪಳ ತಾಲೂಕು ಮಟ್ಟದಲ್ಲಿ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ್, ಗಂಗಾವತಿ- ಜಿಲ್ಲಾ ತರಬೇತಿ ಸಂಸ್ಥೆಯ ಕೃಷ್ಣಮೂರ್ತಿ ದೇಸಾಯಿ, ಕುಷ್ಟಗಿ- ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಬಿ. ಕಲ್ಲೇಶ್ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಸಹಾಯಕ ಕೃಷಿ ನಿರ್ದೇಶಕ ಎ.ಎಲ್. ನಾಯಕ್ ಅವರನ್ನು ತರಬೇತುದಾರರನ್ನಾಗಿ ನೇಮಿಸಲಾಗಿದೆ. ಆಯಾ ತಾಲೂಕು ತಹಸಿಲ್ದಾರರು ಅಂದು ಆಯಾ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಜನಪ್ರತಿನಿಧಿಗಳು, ಪತ್ರಕರ್ತರನ್ನು ಕಾರ್ಯಾಗಾರಕ್ಕೆ ಆಹ್ವಾನಿಸಿ, ಸಕ್ರಿಯವಾಗಿ ಕಾರ್ಯಾಗಾರದಲ್ಲಿ ಭಾಗವಹಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top