ಕೊಪ್ಪಳ ಆ. ೧೨ (ಕ.ವಾ): ಕೊಪ್ಪಳ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆ ಆಗಸ್ಟ್ ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ವಹಿಸುವರು. ಸಭೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗಳು, ಅಂಗನವಾಡಿ ಕಟ್ಟಡಗಳ ನಿರ್ವಹಣೆ, ಕೊಳವೆ ಬಾವಿ, ಕೈಪಂಪ್ ರಿಪೇರಿ, ರಾಜೀವ್‌ಗಾಂಧಿ ಸಬ್ ಮಿಷನ್ ಕುಡಿಯುವ ನೀರಿನ ಯೋಜನೆ, ಸುವರ್ಣ ಗ್ರಾಮ ಯೋಜನೆ, ಸಂಪೂರ್ಣ ಸ್ವಚ್ಛತಾ ಆಂದೋಲನದ ಅನುಷ್ಠಾನ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರು ತಿಳಿಸಿದ್ದಾರೆ.
ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಶಿಕ್ಷಣ: ಶಾಲೆಗಳಿಂದ ಅರ್ಜಿ ಆಹ್ವಾನ
ಕೊಪ್ಪಳ ಆ. ೧೨ (ಕ.ವಾ): ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಆಸಕ್ತಿ ಇರುವ ಹಾಗೂ ಇವರಿಗೆ ಅಗತ್ಯ ಸೌಲಭ್ಯ ನೀಡಲು ಸಿದ್ಧರಿರುವ ಜಿಲ್ಲೆಯ ಉತ್ತಮ ಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಆಸಕ್ತ ಇರಬೇಕು, ಹಾಗೂ ಇವರಿಗೆ ಊಟ ಮತ್ತು ವಸತಿ ನೀಡಲು ಸೌಲಭ್ಯ ಹೊಂದಿರಬೇಕು. ಅರ್ಹ ಶಾಲೆಯವರು ಅರ್ಜಿಯ ಭಾಗ-೧, ಭಾಗ-೨ ಮತ್ತು ಭಾಗ-೩ ರಲ್ಲಿ ವಿವರಗಳನ್ನು ಭರ್ತಿ ಮಾಡಿ ಬಿಸಿಎಮ್ ಜಿಲ್ಲಾ ಅಧಿಕಾರಿಗಳಿಗೆ ಆಗಸ್ಟ್ ೧೬ ರ ಒಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ತಿತಿತಿ.ಞbಛಿತಿಜ.iಟಿ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಟ್ಯಾಕ್ಸಿ ಯೋಜನೆ: ಅರ್ಜಿ ಆಹ್ವಾನ
ಕೊಪ್ಪಳ ಆ. ೧೨ (ಕ.ವಾ): ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಒದಗಿಸುವ ಯೋಜನೆಗಾಗಿ ಅರ್ಜಿ ಆಹ್ವಾನಿಸಿದೆ.
ಪ್ರವಾಸೋದ್ಯಮ ಇಲಾಖೆಯು ಪರಿಶಿಷ್ಟ ಜಾತಿ ವಿಶೇಷ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿ ಜಿಲ್ಲೆಯಲ್ಲಿ ಲಘು ವಾಹನ ಚಾಲನಾ ಪರವಾನಿಗೆ ಮತ್ತು ಬ್ಯಾಡ್ಜ್ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳುವ ದೃಷ್ಟಿಯಿಂದ ಪ್ರವಾಸಿ ತಾಣಗಳಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಲು ೩.೬೦ ಲಕ್ಷ ರೂ. ವೆಚ್ಚದ ಟಾಟಾ ಇಂಡಿಕ್ಯಾಬ್ ಹವಾ ನಿಯಂತ್ರಿತ ಪ್ರವಾಸಿ ಟ್ಯಾಕ್ಸಿಗಳನ್ನು ಸಹಾಯಧನದೊಂದಿಗೆ ಒದಗಿಸಲು ಉದ್ದೇಶಿಸಿದೆ. ಪ್ರವಾಸಿ ಟ್ಯಾಕ್ಸಿಗೆ ತಗಲುವು ಒಟ್ಟು ವೆಚ್ಚದ ಶೇ. ೫೦ ರಷ್ಟು ಇಲಾಖೆಯಿಂದ ಧನ ಸಹಾಯದ ರೂಪದಲ್ಲಿ ಒದಗಿಸಲಾಗುವುದು. ಶೇ. ೫ ರಷ್ಟನ್ನು ಫಲಾನುಭವಿಗಳು ಭರಿಸಬೇಕು. ಉಳಿದ ಶೇ. ೪೫ ರಷ್ಟು ಮೊತ್ತವನ್ನು ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಸಾಲ ಮಂಜೂರು ಮಾಡಿಸಿ ಪ್ರವಾಸಿ ಟ್ಯಾಕ್ಸಿ ಖರೀದಿಸಿ ಕೊಡಲಾಗುವುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಲಘುವಾಹನ ಚಾಲನಾ ಪರವಾನಿಗೆ ಹಾಗೂ ಬ್ಯಾಡ್ಜ್ ಹೊಂದಿರಬೇಕು, ವಯೋಮಿತಿ ೨೦ ರಿಂದ ೪೦ ವರ್ಷದೊಳಗಿರಬೇಕು, ಕೊಪ್ಪಳ ಜಿಲ್ಲೆಯಲ್ಲಿ ವಾಸಿಸುತ್ತಿರಬೇಕು, ಕನಿಷ್ಟ ೧೦ ನೇ ತರಗತಿ ಉತ್ತೀರ್ಣರಾಗಿರಬೇಕು, ವಾರ್ಷಿಕ ವರಮಾನ ಗ್ರಾಮೀಣರಿಗೆ ರೂ. ೪೦೦೦೦ ಹಾಗೂ ನಗರ ಪ್ರದೇಶದವರಿಗೆ ರೂ. ೫೫೦೦೦ ಮೀರಿರಬಾರದು, ಅರ್ಜಿದಾರರ ಕುಟುಂಬದಲ್ಲಿ ಯಾರೂ ಖಾಯಂ ಸರ್ಕಾರಿ ನೌಕರಿಯಲ್ಲಿರಬಾರದು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಣಗೊಳಿಸಿದ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಖಾಯಂ ಲಘುವಾಹನ ಚಾಲನಾ ಪರವಾನಿಗೆ, ಬ್ಯಾಡ್ಜ್, ಪಡಿತರ ಚೀಟಿ/ಚುನಾವಣಾ ಗುರುತಿನ ಚೀಟಿ, ಜಾತಿ, ಆದಾಯ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣ ಪತ್ರ, ಈ ಹಿಂದೆ ಈ ಸೌಲಭ್ಯ ಪಡೆಯದೇ ಇರುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ದೃಢೀಕರಣ ಪತ್ರ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ನಿರುದ್ಯೋಗಿಯಾಗಿರುವ ಬಗ್ಗೆ ಪಡೆದಿರುವ ದೃಢೀಕರಣ ಪತ್ರ, ಸ್ಥಳೀಯ ಗಣ್ಯ ವ್ಯಕ್ತಿಗಳಿಂದ ಮತ್ತು ಸರ್ಕಾರಿ ಗೆಜೆಟೆಡ್ ಅಧಿಕಾರಿಗಳಿಂದ ಪಡೆದ ಅಭ್ಯರ್ಥಿಯ ಗುಣ ಮತ್ತು ನಡತೆ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಸಿ ಆಯ್ಕೆಯಾಗದೇ ಇರುವವರು, ಪುನಃ ಅರ್ಜಿ ಸಲ್ಲಿಸಬೇಕು. ನಿಗದಿತ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ರೈಲ್ವೆ ಸ್ಟೇಷನ್ ರಸ್ತೆ, ಶ್ರೀ ಉತ್ತರಾಧಿ ಮಠದ ಎದುರು, ಕೆ.ಆರ್.ಕೆ. ರೆಸಿಡೆನ್ಸಿ, ಹೊಸಪೇಟೆ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ದ್ವಿಪ್ರತಿಯಲ್ಲಿ ಮೇಲೆ ತಿಳಿಸಿದ ಅಧಿಕಾರಿಗಳ ಕಚೇರಿಗೆ ಈ ಪತ್ರಿಕಾ ಪ್ರಕಟಣೆಯ ೨೦ ದಿನಗಳ ಒಳಗಾಗಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ: ಆ. ೧೮ ರಂದು ಕೊಪ್ಪಳ ತಾ.ಪಂ. ಸಾಮಾನ್ಯ ಸಭೆ
ಕೊಪ್ಪಳ ಆ. ೧೨ : ಕೊಪ್ಪಳ ತಾಲೂಕಾ ಪಂಚಾಯತಿ ಸಾಮಾನ್ಯ ಸಭೆ ಆ. ೧೮ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ತಾಲೂಕಾ ಪಂಚಾಯತಿ ಅಧ್ಯಕ್ಷ ಅಮರೇಶ ಉಪಲಾಪುರ ಅವರು ವಹಿಸುವರು ಎಂದು ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
0 comments:
Post a Comment