PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. ೧೪ (ಕ.ವಾ): ನೆರೆಹಾವಳಿ ಕಾರಣದಿಂದ ಸ್ಥಳಾಂತರಿಸಲಾಗುತ್ತಿರುವ ನರೇಗಲ್ ನವಗ್ರಾಮದಲ್ಲಿ ಪ್ರತಿ ಮನೆಗೊಂದರಂತೆ ಗಿಡ ನೆಡುವ ಕಾರ್ಯಕ್ರಮವನ್ನು ಆ. ೧೫ ರಂದು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ ಅವರು ತಿಳಿಸಿದ್ದಾರೆ.
ನೂತನ ನರೇಗಲ್ ನವಗ್ರಾಮದಲ್ಲಿ ೪೦೦ ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗುತ್ತಿದೆ. ಸದ್ಯ ಮಳೆಗಾಲ ಇರುವುದರಿಂದ, ಈಗಿನಿಂದಲೇ ಪ್ರತಿ ಮನೆಗೊಂದರಂತೆ ಗಿಡಗಳನ್ನು ನೆಟ್ಟು, ಬೆಳೆಸಿದಲ್ಲಿ, ನರೇಗಲ್ ಗ್ರಾಮ ಮಾದರಿ ಹಸಿರು ಗ್ರಾಮವಾಗಿ ಕಂಗೊಳಿಸಲಿದೆ. ಈ ನಿಟ್ಟಿನಲ್ಲಿ ಆ. ೧೫ ರಂದು ನರೇಗಲ್ ನವಗ್ರಾಮದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಗ್ರಾಮಸ್ಥರು, ಜನಪ್ರತಿನಿಧಿಗಳು, ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಸಹಕರಿಸಬೇಕು. ಈ ಮೂಲಕ ಉತ್ತಮ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ ಅವರು ಮನವಿ ಮಾಡಿಕೊಂಡಿದ್ದಾರೆ.

Advertisement

0 comments:

Post a Comment

 
Top