PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ.: ಕರ್ನಾಟಕ ರಾಜ್ಯಾದ್ಯಂತ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ಸೇವೆಯನ್ನು ಬಾಹ್ಯ ಮೂಲಗಳಿಂದ ಪಡೆಯಲು ಬೆಂಗಳೂರಿನ ಮೆ: ಆಸ್ಟ್ರಿಕ್ಸ್ ಟೆಕ್ನಾಲಜೀಸ್ ಪ್ರೈ.ಲಿಮಿಟೆಡ್ ಖಾಸಗಿ ಕಂಪನಿಗೆ ಜವಾಬ್ದಾರಿಯನ್ನು ವಹಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ರಾಜ್ಯದಲ್ಲಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ೯ ಮತ್ತು ೧೦ನೇ ತರಗತಿ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಿಕ್ಷಕರ ಸೇವೆಯನ್ನು ಬಾಹ್ಯ ಮೂಲಗಳಿಂದ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ಹಾಗೂ ಮೆರಿಟ್ ಆಧಾರದ ಮೇಲೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಹಾಗೂ ಸೇವೆಯನ್ನು ಒದಗಿಸುವ ಜವಾಬ್ದಾರಿಯನ್ನು ಬೆಂಗಳೂರಿನ ಮೆ: ಆಸ್ಟ್ರಿಕ್ಸ್ ಟೆಕ್ನಾಲಜೀಸ್ ಪ್ರೈ.ಲಿಮಿಟೆಡ್ ಇವರಿಗೆ ವಹಿಸಲಾಗಿದೆ. ಈ ಸಂಸ್ಥೆಯು ಸುಮಾರು ೨೨೬೬ ಶಿಕ್ಷಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಉದ್ದೇಶಿಸಿದೆ. ಫುಲ್ ಟೈಮ್ ಶಿಕ್ಷಕರಿಗೆ ಮಾಸಿಕ ರೂ. ೧೨೦೦೦- ೧೪೦೦೦, ಪಾರ್ಟ್ ಟೈಮ್ ಶಿಕ್ಷಕರಿಗೆ ಮಾಸಿಕ ೭೦೦೦ ರೂ. ವೇತನ ಇರುತ್ತದೆ. ಸಂಸ್ಥೆಯು ಆನ್‌ಲೈನ್ ಮೂಲಕ ಅರ್ಜಿಯನ್ನು ಕರೆದು ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಿದೆ. ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ತಿತಿತಿ.ಚಿsಣಡಿix.ಛಿo.iಟಿ ವೆಬ್‌ಸೈಟ್ ಸಂಪರ್ಕಿಸಿ ಆಗಸ್ಟ್ ೮ ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಹೆಚ್ಚಿನ ವಿವರಗಳಿಗೆ ಸಹಾಯವಾಣಿ ೦೮೦- ೪೧೩೦೬೩೨೮/೩೨೯/೩೩೦/೩೩೧ ಕ್ಕೆ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top