PLEASE LOGIN TO KANNADANET.COM FOR REGULAR NEWS-UPDATES



ಕೊಪ್ಪಳ ಆ. : ಭಾರತದ ೬೫ ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ಆ. ೧೫ ರಂದು ಬೆಳಿಗ್ಗೆ ೯ ಗಂಟೆಗೆ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಎಸ್ ಸವದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಸಂಸದ ಶಿವರಾಮಗೌಡ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ್ ವಲ್ಲ್ಯಾಪುರ, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ನಾಗರಾಜ ಬಿಲ್ಗಾರ್, ಶಾಸಕರುಗಳಾದ ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ್, ಅಮರೇಗೌಡ ಪಾಟೀಲ ಬಯ್ಯಾಪುರ, ಶಿವರಾಜ ಎಸ್ ತಂಗಡಗಿ, ಹಾಲಪ್ಪ ಆಚಾರ್, ಮನೋಹರ ಮಸ್ಕಿ, ಶಶಿಲ್ ನಮೋಶಿ, ಹೆಚ್.ಸಿ. ನೀರಾವರಿ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಡಾ. ಸೀತಾ ಗೂಳಪ್ಪ ಹಲಗೇರಿ, ತಾ.ಪಂ. ಅಧ್ಯಕ್ಷ ಅಮರೇಶ ಉಪಲಾಪುರ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಳಕಪ್ಪ ಜಾಧವ್ ಮುಂತಾದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರು ಉಪಸ್ಥಿತರಿರುವರು.

Advertisement

0 comments:

Post a Comment

 
Top