ಕೊಪ್ಪಳ ಆ. ೨೯ (ಕ.ವಾ): ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಯೋಜನೆಯಡಿ ಟ್ರ್ಯಾಕ್ಟರ್‌ಗಳಿಗೆ ಸಹಾಯಧನ ನೀಡಲಾಗುತ್ತಿಲ್ಲ ಎಂದು ಜಂಟಿಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕೃಷಿ ಯಾಂತ್ರೀಕರಣ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಟ್ರ್ಯಾಕ್ಟರ್‌ಗಳಿಗೆ ಸಹಾಯಧನ ನೀಡಲಾಗುತ್ತಿಲ್ಲ. ಉಳಿದಂತೆ ಪವರ್ ಟಿಲ್ಲರ್‌ಗಳು, ವಿವಿಧ ರೀತಿಯ ಕೃಷಿ ಯಂತ್ರೋಪಕರಣಗಳು, ಡೀಸಲ್ ಪಂಪ್‌ಸೆಟ್, ಸಸ್ಯ ಸಂರಕ್ಷಣಾ ಉಪಕರಣ, ನವೀನ ಕೃಷಿ ಯಂತ್ರೋಪಕರಣಗಳನ್ನು ಮತ್ತು ಕೃಷಿ ಸಂಸ್ಕರಣೆ ಘಟಕಗಳನ್ನು ಸಹಾಯಧನದಡಿ ವಿತರಿಸಲಾಗುತ್ತಿದೆ. ರೈತರು, ಸ್ವ ಸಹಾಯ ಗುಂಪುಗಳು ಯೋಜನೆಯ ಲಾಭ ಪಡೆಯಲು ಮುಂದಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಗಳು ಅಥವಾ ಆಯಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment