PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. ೧೮ (ಕ.ವಾ): ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರ ೯೬ ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ.
ಸಮಾರಂಭದ ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ ಲಕ್ಷ್ಮಣ ಎಸ್ ಸವದಿ ಅವರು ನೆರವೇರಿಸುವರು. ಸಂಸದ ಶಿವರಾಮಗೌಡ ಅವರು ಅಧ್ಯಕ್ಷತೆ ವಹಿಸಲಿರುವ ಈ ಸಮಾರಂಭದಲ್ಲಿ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಗಣ್ಣ ಕರಡಿ, ಸಮಾಜ ಕಲ್ಯಾಣ ಸಚಿವ ಎ. ನಾರಾಯಣಸ್ವಾಮಿ, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನೀಲ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಈಶಣ್ಣ ಗುಳಗಣ್ಣವರ, ಪರಣ್ಣ ಮುನವಳ್ಳಿ, ಶಿವರಾಜ ತಂಗಡಗಿ, ಶಶೀಲ್ ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿ.ಪಂ. ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ತಾಲೂಕಾ ಪಂಚಾಯತಿ ಅಧ್ಯಕ್ಷ ಅಮರೇಶ ಉಪಲಾಪುರ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಳಕಪ್ಪ ಜಾಧವ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಯಲಬುರ್ಗಾ ತಾಲೂಕು ಸರ್ಕಾರಿ ಪ.ಪೂ. ಕಾಲೇಜಿನ ಉಪನ್ಯಾಸಕ ಗಂಗಾಧರ ಜಿ. ಕುರಹಟ್ಟಿ ಅವರು ಸಮಾರಂಭದಲ್ಲಿ ವಿಶೇಷ ಉಪನ್ಯಾಸಕರಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ, ಬಿ.ಸಿ.ಎಮ್. ಜಿಲ್ಲಾ ಅಧಿಕಾರಿ ಕಲ್ಲೇಶ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿರುವರು. ದೇವರಾಜ ಅರಸು ರವರ ಜನ್ಮದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ ೮ ಗಂಟೆಗೆ ದೇವರಾಜ ಅರಸು ರವರ ಭಾವಚಿತ್ರದೊಂದಿಗೆ ಗವಿಸಿದ್ದೇಶ್ವರ ಕ್ರೀಡಾಂಗಣದಿಂದ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ಭವ್ಯ ಮೆರವಣಿಗೆ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಜಿಲ್ಲಾ, ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸುವಂತೆ ಬಿ.ಸಿ.ಎಮ್. ಜಿಲ್ಲಾ ಅಧಿಕಾರಿ ಕಲ್ಲೇಶ್ ಅವರು ಮನವಿ ಮಾಡಿದ್ದಾರೆ.

Advertisement

0 comments:

Post a Comment

 
Top