PLEASE LOGIN TO KANNADANET.COM FOR REGULAR NEWS-UPDATES


ಸೃಜನಶೀಲ ಯುವ ಬರಹಗಾರರಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ಸ್ಥಾಪಿತವಾದ ಟೊಟೊ ಪುರಸ್ಕಾರವು ಕಳೆದ ವರ್ಷದಿಂದ ಕನ್ನಡಕ್ಕೂ ವಿಸ್ತಾರಗೊಂಡಿದೆ. ಈ ಪ್ರಶಸ್ತಿಯನ್ನು ಟೊಟೊ ಫಂಡ್ಸ್ ದಿ ಆರ್ಟ್ಸ್ (Toto Funds the Arts – TFA) ಸಂಸ್ಥೆಯು ಸ್ಥಾಪಿಸಿ ನಿರ್ವಹಿಸುತ್ತಿದೆ. ಈ ಪ್ರಶಸ್ತಿಯು ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾಗಿದೆ.

2012 ನೇ ಸಾಲಿನ ಕನ್ನಡ ಟೊಟೊ ಪುರಸ್ಕಾರಕ್ಕಾಗಿ ಟಿ.ಎಫ್.ಎ ಸಂಸ್ಥೆಯು ಪ್ರವೇಶಗಳನ್ನು ಆಹ್ವಾನಿಸುತ್ತಿದೆ. ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು. ಕಥೆ, ಕವಿತೆ ಮತ್ತು ನಾಟಕ ಈ ಮೂರರಲ್ಲಿ ಯಾವುದೇ ಪ್ರಕಾರದ ಕನ್ನಡ ರಚನೆಗಳನ್ನು ಪ್ರವೇಶಗಳಾಗಿ ಕಳಿಸಬಹುದು. ಪುರಸ್ಕಾರದ ಆಯ್ಕೆಯನ್ನು ಕನ್ನಡದ ಹಿರಿಯ ಬರಹಗಾರರ ಸಮಿತಿಯು ಮಾಡಲಿದೆ. ಪುರಸ್ಕೃತರು 25000 ರೂಪಾಯಿಗಳ ನಗದು ಬಹುಮಾನವನ್ನು ಪಡೆಯುವರು. ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನಾಂಕ: 15 ಅಕ್ಟೋಬರ್ 2011.

ಟಿ.ಎಫ್.ಎ. ಸಂಸ್ಥೆಯು ಆಂಗಿರಸ `ಟೊಟೊ` ವೆಲ್ಲಾನಿಯ ಸ್ಮರಣಾರ್ಥ 2004 ರಲ್ಲಿ ಸ್ಥಾಪಿತವಾಯಿತು. ಕಲೆಗಳ ಬಗ್ಗೆ ಗಾಢವಾದ ಆಸಕ್ತಿಯನ್ನಿರಿಸಿಕೊಂಡಿದ್ದ ಟೊಟೊರವರ ಅಕಾಲಿಕ ಮರಣವು ಅವರ ಕುಟುಂಬ ಮತ್ತು ಸ್ನೇಹಿತರನ್ನು ಈ ಸಂಸ್ಥೆಯ ಸ್ಥಾಪನೆಗೆ ಪ್ರೇರೇಪಿಸಿತು. ಈ ಮೂಲಕ ಯುವ ಪ್ರತಿಭೆಗಳಿಗೆ ತಮ್ಮ ಕಲಾತ್ಮಕ ಅಭಿವ್ಯಕ್ತಿಯನ್ನು ಕಂಡುಕೊಳ್ಳಲು ಉತ್ತೇಜನ ಸಿಗಲೆಂಬುದು ಇದರ ಆಶಯವಾಗಿದೆ.

ಟೊಟೊ ವಾರ್ಷಿಕ ಪ್ರಶಸ್ತಿಗಳನ್ನು ಛಾಯಾಚಿತ್ರ, ಸಂಗೀತ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರಗಳಿಗೆ ಕೊಡಲಾಗುತ್ತದೆ. ಪ್ರಶಸ್ತಿಯ ಪ್ರವೇಶದ ವಿವರಗಳನ್ನು http://totofundsthearts.blogspot.com ತಾಣದಿಂದ ಪಡೆಯಬಹುದು.

Advertisement

0 comments:

Post a Comment

 
Top