PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ಭ್ರಷ್ಟಾಚಾರದ ವಿರುದ್ದ ಹೋರಾಟ ಮಾಡುತ್ತಿರುವ ಹಾಗೂ ಜನಲೋಕಪಾಲ ಮಸೂದೆ ಜಾರಿ ಮಾಡುವಂತೆ ಆಗ್ರಹಿಸಿ ಉಪವಾಸಕ್ಕೆ ಮುಂದಾದ ಅಣ್ಣಾ ಹಜಾರೆ ಬಂಧನಕ್ಕೆ ಜಿಲ್ಲೆಯೆಲ್ಲಡೆ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿದೆ. ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹಜಾರೆಯವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಜಿಲ್ಲಾಡಳಿತ ಭವನದ ಎದುರು ಹಲವಾರು ಸಂಘಟನೆಗಳು ಸೇರಿಕೊಂಡು ಜನಲೋಕಪಾಲ ಮಸೂದೆ ಬೆಂಬಲ ಹೋರಾಟ ವೇದಿಕೆಯಡಿಯಲ್ಲಿ ಪ್ರತಿಭಟನೆ ನಡೆಸಿದರು. ಅಶೋಕ್ ವೃತ್ತದಲ್ಲಿ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ್ರಧಾನಿ ಪ್ರತಿಕೃತಿ ದಹನ ಮಾಡಿದರು. ಜಿಲ್ಲಾ ವಕೀಲರ ಸಂಘ ಕೋರ್ಟ ಕಲಾಪಗಳನ್ನು ಬಹಿಷ್ಕರಿಸಿ ನ್ಯಾಯಾಲಯದ ಆವರಣದಲ್ಲಿಯೇ ಪ್ರತಿಭಟನೆ ನಡೆಸಿತು.
ಯಲಬುರ್ಗಾದಲ್ಲಿಯೂ ವಕೀಲರು ಕಲಾಪಗಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಗಂಗಾವತಿಯಲ್ಲಿ ಸನಿಹ ಗ್ರಾಮೀಣಾಭಿವೃದ್ದಿ ಮತ್ತು ಮಾನವ ಸಂಪನ್ಮೂಲ ಸಂಸ್ಥೆ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿತು. ಸಂಸ್ಥೆಯ ಅಧ್ಯಕ್ಷ ಧನರಾಜ್ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ವಕೀಲರ ಸಂಘದ ಸದಸ್ಯರು ಸಹ ಪ್ರತಿಭಟನೆ ಸಾಥ್ ನೀಡಿದರು. ರಸ್ತೆ ತಡೆಗೆ ಮುಂದಾದ ಪ್ರತಿಭಟನಾಕಾರರನ್ನು ಪೋಲೀಸರು ಬಂಧಿಸಿ ಬಿಡುಗಡೆ ಮಾಡಿದರು.
ಇಂದು ಜೈಲ್ ಭರೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸನಿಹ ಸಂಸ್ಥೆಯ ಅಧ್ಯಕ್ಷ ಧನರಾಜ್ ಹೇಳಿದ್ದಾರೆ.

Advertisement

0 comments:

Post a Comment

 
Top