PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. ೩೦ (ಕ.ವಾ): ಕೊಪ್ಪಳ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದಂತೆ ಭಾರತದ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಆ. ೩೦ ರಂದು ಮಂಗಳವಾರ ಪ್ರಕಟಿಸಿದೆ.
ಭಾರತ ಚುನಾವಣಾ ಆಯೋಗ ಕೊಪ್ಪಳ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಚುನಾವಣಾ ವೇಳಾಪಟ್ಟಿಯನ್ವಯ ಸೆ. ೨ ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಸೆ. ೯ ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳ ಪರಿಶೀಲನೆ ಸೆ. ೧೦ ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಸೆ. ೧೨ ಕೊನೆಯ ದಿನಾಂಕವಾಗಿದ್ದು, ಮತದಾನ ಸೆ. ೨೬ ರಂದು ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ನಡೆಯಲಿದೆ. ಮತ ಎಣಿಕೆ ಕಾರ್ಯ ಸೆ. ೨೯ ರಂದು ನಡೆಯಲಿದ್ದು, ಮತದಾನ ಪ್ರಕ್ರಿಯೆ ಅಕ್ಟೋಬರ್ ೩ ರ ಒಳಗಾಗಿ ಪೂರ್ಣಗೊಳಿಸಬೇಕಾಗಿದೆ. ಉಪಚುನಾವಣೆಗೆ ಎಲೆಕ್ಟ್ರಾನಿಕ್ ಮತ ಯಂತ್ರ ಬಳಸುವಂತೆ ಭಾರತ ಚುನಾವಣಾ ಆಯೋಗ ಸೂಚನೆ ನೀಡಿದ್ದು, ಈ ಕುರಿತಂತೆ ಮತಯಂತ್ರಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ತಿಳಿಸಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಭಾರತ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

Advertisement

0 comments:

Post a Comment

 
Top