ಜೆಡಿಎಸ್‌ನಿಂದ ಆಯ್ಕೆಯಾಗಿದ್ದ ಕರಡಿ ಸಂಗಣ್ಣ ‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಗೆ ಸೇರಿದ್ದರಿಂದ ಈ ಉಪಚುನಾವಣೆ ನಡೆದಿದೆ. ಬೆಳಗ್ಗೆ 7ರಿಂದ ಸಂಜೆ 5ರ ವರೆಗೆ ನಡೆದ ಮತದಾನದಲ್ಲಿ ಕ್ಷೇತ್ರದಾದ್ಯಂತ ಮತದಾರರು ಉತ್ಸಾಹದಿಂದ ತಮ್ಮ ಮತ ಚಲಾಯಿಸಿದರು. ಕ್ಷೇತ್ರದ ವಿವಿಧ ಕಡೆ, ವೃದ್ಧರು, ಮಹಿಳೆಯರು, ಪುರುಷರು, ಯುವಕ, ಯುವತಿಯರು ಸಾಲು ಗಟ್ಟಿ ನಿಂತು ಮತದಾನ ಮಾಡುತ್ತಿದ್ದ ದೃಶ್ಯ ಕಂಡು ಬಂತು. ಬೆಳಗ್ಗೆ ಮತದಾನ ನಿಧಾನಗತಿಯಲ್ಲಿ ಸಾಗಿದ್ದು, ಮಧ್ಯಾಹ್ನದ ವೇಳೆ ಚುರುಕಾಗಿತ್ತು. ಒಟ್ಟು ಶೇ.71.47ರಷ್ಟು ಮತದಾನವಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಮತದಾನದ ವೇಳೆ ಎಲ್ಲಿಯೂ ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಹೇಳಿದ್ದಾರೆ. ಕೆಲವು ಕಡೆ ಮತದಾನದ ವೇಳೆ ಗೊಂದಲಗಳು ಉಂಟಾಗಿದ್ದು, ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇಲ್ಲದಿದ್ದ ಕಾರಣ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರದೀಪ್ ಗೌಡ ಪಾಟೀಲ್ಮ ತ ಚಲಾಯಿಸಿದರು. ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಹಿಟ್ನಾಳ್, ಹಿಟ್ನಾಳ್‌ನಲ್ಲಿ ಮತ ಚಲಾಯಿಸಿದರು. ಚುನಾವಣಾ ಕಣದಲ್ಲಿ 14 ಮಂದಿ ಅಭ್ಯರ್ಥಿಗಳಿದ್ದು, ಅವರ ರಾಜಕೀಯ ಭವಿಷ್ಯ ವಿದ್ಯುನ್ಮಾನ ಮತ ಯಂತ್ರದಲ್ಲಿ ಭದ್ರವಾಗಿದೆ.
0ಮತ ಎಣಿಕೆ ಕಾರ್ಯ ಸೆ.29ರಂದು ನಡೆಯಲಿದ್ದು, ವಿದ್ಯುನ್ಮಾನ ಮತ ಯಂತ್ರಗಳನ್ನು ಪೊಲೀಸ್ ಭದ್ರತೆಯಲ್ಲಿಡಲಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ಗಳ ಮಧ್ಯೆ ತ್ರಿಕೋನ ಸ್ಪರ್ಧೆಯಿದ್ದು
0 comments:
Post a Comment