ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಪ್ರತಿಷ್ಠೆಯ ಕಣವಾಗಿರುವ ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರಕ್ಕೆ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಸೇರಿದಂತೆ ಸಂಪುಟ ಸಚಿವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮಂತಾದ ಹಲವು ಘಟಾನುಘಟಿಗಳು ಭಾಗಿಯಾಗಿದ್ದರು.
ಬಿಜೆಪಿಯ ಕರಡಿ ಸಂಗಣ್ಣ , ಜೆಡಿಎಸ್‌ನ ಪ್ರದೀಪ್ ಗೌಡ ಪಾಟೀಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ್ ಹಿಟ್ನಾಳ್ ಸೇರಿದಂತೆ ಒಟ್ಟು 14 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಪಕ್ಷೇತರ ಅಭ್ಯರ್ಥಿಗಳು ಪ್ರಮುಖ ಅಡ್ಡಿ ಎಂದು ಹೇಳಲಾಗುತ್ತಿದೆ. ನಮ್ಮ ಅಭ್ಯರ್ಥಿಯ ಗೆಲುವಿನ ವಿಶ್ವಾಸ: ಕೊನೆಯ ಎರಡು ದಿನಗಳಲ್ಲಿ ಬಿಜೆಪಿಯ ಹಣದ ಕರಾಮತ್ತು ಕೊಪ್ಪಳದಲ್ಲಿ ನಡೆಯುವುದಿಲ್ಲ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಣ ಹಂಚಿಕೆ ತಡೆಯಲು ಆಗ್ರಹ: ರಾಜ್ಯ ಸರಕಾರ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಂಪುಟ ಸಚಿವರ ಮೂಲಕ ಹಣದ ಹೊಳೆಯನ್ನು ಕ್ಷೇತ್ರದಲ್ಲಿ ಹರಿಸುತ್ತಿದ್ದು ಅದನ್ನು ತಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.
ಶಾಲಾ-ಕಾಲೇಜುಗಳಿಗೆ ರಜೆ: ಸೆ.26ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕ್ಷೇತ್ರವ್ಯಾಪ್ತಿಯ ಶಾಲಾ-ಕಾಲೇಜುಗಳು, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ
0 comments:
Post a Comment