PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಸೆ. : ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ವೆಚ್ಚ ನಿಗಾ ಘಟಕವನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
  ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಹಾಗೂ ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ದೂರುಗಳನ್ನು ಸಂಗ್ರಹಿಸಲು ಜಿಲ್ಲಾ ಚುನಾವಣಾ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾ ವೆಚ್ಚ ನಿಗಾ ಘಟಕ ಸ್ಥಾಪಿಸಲಾಗಿದೆ.  ಈ ಘಟಕದ ದೂರವಾಣಿ ಸಂ: ೦೮೫೩೯- ೨೨೫೦೦೨ ಆಗಿದೆ.    ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳಿದ್ದಲ್ಲಿ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top