ಕೊಪ್ಪಳ ಸೆ. ): ಕೊಪ್ಪಳ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಅಂಗವಾಗಿ ಮತದಾನ ನಡೆಯಲಿರುವ ಸೆ. ೨೬ ರಂದು ಕೊಪ್ಪಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತಕ್ಷೇತ್ರಗಳ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಕೇಂದ್ರ ಸರ್ಕಾರಿ ಕಚೇರಿಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಎಲ್ಲಾ ಶಾಲಾ ಕಾಲೇಜುಗಳು, ಎಲ್ಲಾ ಕಾರ್ಖಾನೆಗಳು, ನಿಗಮಗಳು, ಸ್ಥಳೀಯ ಸಂಸ್ಥೆ, ಮಂಡಳಿಗಳ ಕಚೇರಿಗಳಿಗೆ ಹಾಗೂ ನೆಗೋಷಿಯೇಬಲ್ ಆಕ್ಟ್ ಪ್ರಕಾರ ಎಲ್ಲಾ ಬ್ಯಾಂಕ್‌ಗಳಿಗೂ ಸರ್ಕಾರ ಸಾರ್ವತ್ರಿಕ ರಜೆ ಘೋಷಿಸಿದೆ. ಈ ರಜೆಯು ತುರ್ತು ಕೆಲಸಗಳಿಗೆ ಅನ್ವಯವಾಗುವುದಿಲ್ಲ. ಈ ಕ್ಷೇತ್ರದಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿ, ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ, ಅಂತಹ ಕಚೇರಿ ಹಾಗೂ ಶಾಲೆಗಳಿಗೆ ಸೆ. ೨೫ ರಂದು ಮತ್ತು ಮತ ಎಣಿಕೆ ದಿನದಂದು ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜಾ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳಬಹುದಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
0 comments:
Post a Comment