ಕೊಪ್ಪಳ ಸೆ. : ಕೊಪ್ಪಳ ವಿಧಾನಸಬಾ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಿರುವ ಎಲ್ಲಾ ೧೯ ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದ್ದು, ಯಾವುದೆ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿಲ್ಲ ಎಂದು ಕೊಪ್ಪಳ ವಿಧಾನಸಭೆ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಅವರು ತಿಳಿಸಿದ್ದಾರೆ.
ಕೊಪ್ಪಳ ವಿಧಾನಸಭೆ ಕ್ಷೇತ್ರ ಉಪಚುನಾವಣೆಗಾಗಿ ಅಧಿಸೂಚನೆ ಹೊರಡಿಸಲಾಗಿದ್ದ ಸೆ. ೨ ರಿಂದ ಮೊದಲುಗೊಂಡು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗದ್ದ ಸೆ. ೯ ರವರೆಗೆ ಒಟ್ಟು ೧೯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಸೆ. ೧೦ ರಂದು ನಡೆದ ನಾಮಪತ್ರ ಪರಿಶೀಲನೆ ನಡೆಸಲಾಗಿದ್ದು, ಎಲ್ಲಾ ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಸಹಾಯಕ ಆಯುಕ್ತ ಶರಣಬಸಪ್ಪ ಅವರು ತಿಳಿಸಿದ್ದಾರೆ.
0 comments:
Post a Comment