ಕೊಪ್ಪಳ ಅ. ೦೧ (ಕ.ವಾ): ಈಶಾನ್ಯ ಪದವಿಧರ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪದವಿಧರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಕುರಿತು ಹಾಗೂ ಹೆಸರು ಸೇರ್ಪಡೆ ಕುರಿತು ಪರಿಶೀಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಗೆ ಅರ್ಹತಾ ೨೦೧೧ ರ ಜನವರಿ ೦೧ ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಈಶಾನ್ಯ ಪದವಿಧರ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯದ ಸಲುವಾಗಿ ಮತದಾರರ ಕರಡು ಪಟ್ಟಿಯನ್ನು ಅಕ್ಟೋಬರ್ ೦೧ ರಂದು ಪ್ರಕಟಿಸಲಾಗಿದೆ. ಈ ಮತದಾರರ ಕರಡು ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ ೦೧ ರಿಂದ ನವೆಂಬರ್ ೦೫ರವರೆಗೆ ಅವಧಿ ನಿಗದಿಪಡಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಡಿಸೆಂಬರ್ ೦೯ ರವರೆಗೂ ವಿಲೇವಾರಿ ಮಾಡಲಾಗುವುದು. ಮತದಾರರ ಅಂತಿಮ ಪಟ್ಟಿಯನ್ನು ೨೦೧೧ ರ ಡಿಸೆಂಬರ್ ೧೨ ರಂದು ಪ್ರಕಟಿಸಲಾಗುವುದು. ಈಲ್ಲೆಯ ವ್ಯಾಪ್ತಿಯಲ್ಲಿ ಬರುವ ಪದವಿಧರರು, ಮತದಾರರ ಪಟ್ಟಿಗಳಲ್ಲಿ ಹೆಸರು ಇರುವ ಬಗ್ಗೆ ಪರಿಶೀಲಿಸಬೇಕು, ಹೊಸದಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಕೊಳ್ಳಲು ಮತ್ತು ಬದಲಾವಣೆಗಳು ಇದ್ದಲ್ಲಿ, ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ ಅವಧಿಯಲ್ಲಿ ಆಯಾ ತಹಸಿಲ್ದಾರರ ಕಾರ್ಯಾಲಯ, ಸಹಾಯಕ ಆಯುಕ್ತರು, ಕೊಪ್ಪಳ ಅಥವಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೂಕ್ತ ಅರ್ಜಿ ಪಡೆದುಕೊಂಡು, ಭರ್ತಿ ಮಾಡಿ ಆಯಾ ಕಚೇರಿಯಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ
0 comments:
Post a Comment