ಕೊಪ್ಪಳ ಅ. : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅಕ್ಟೋಬರ್ ೧೧ ರಂದು ಮಂಗಳವಾರ ಬೆಳಿಗ್ಗೆ ೧೧-೪೫ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಆಯೋಜಿಸಲಾಗಿದೆ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯ ಕೃಷಿ ಮಾರುಕಟ್ಟೆ ಮತ್ತು ಸಹಕಾರ ಸಚಿವ ಲಕ್ಷ್ಮಣ ಎಸ್ ಸವದಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುನಿಲ್ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಈಶಣ್ಣ ಗುಳಗಣ್ಣವರ, ಪರಣ್ಣ ಮುನವಳ್ಳಿ, ಶಿವರಾಜ ಎಸ್ ತಂಗಡಗಿ, ಮನೋಹರ ಮಸ್ಕಿ, ಶಶಿಲ್ ನಮೋಶಿ, ಹೆಚ್.ಸಿ. ನೀರಾವರಿ, ಹಾಲಪ್ಪ ಆಚಾರ್, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ತಾಲೂಕಾ ಪಂಚಾಯತಿ ಅಧ್ಯಕ್ಷ ಅಮರೇಶ ಉಪಲಾಪುರ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಳಕಪ್ಪ ಜಾದವ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಅವರು ಸಮಾರಂಭದಲ್ಲಿ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಧಾರವಾಡದ ಕರ್ನಾಟಕ ಕಾಲೇಜಿನ ಪ್ರಾಧ್ಯಾಪಕ ಡಾ. ಡಿ.ಬಿ. ಕರಡೋಣಿ ಅವರು ಮಹರ್ಷಿ ವಾಲ್ಮೀಕಿ ಕುರಿತಂತೆ ವಿಶೇಷ ಉಪನ್ಯಾಸ ನೀಡುವರು.
ಸಮಾರಂಭಕ್ಕೂ ಪೂರ್ವದಲ್ಲಿ ಅ. ೧೧ ರಂದು ಬೆಳಿಗ್ಗೆ ೯ ಗಂಟೆಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದೊಂದಿಗೆ ಹಲವು ಕಲಾತಂಡಗಳ ಮೆರವಣಿಗೆ ಕೊಪ್ಪಳದ ಶಿರಸಪ್ಪಯ್ಯನ ಮಠದಿಂದ, ಗಡಿಯಾರ ಕಂಭ, ಅಶೋಕ ವೃತ್ತದ ಮೂಲಕ ಸಾಹಿತ್ಯ ಭವನದವರೆಗೆ ಮೆರವಣಿಗೆ ಸಾಗಿಬರಲಿದೆ. ಸಾರ್ವಜನಿಕರು, ವಿವಿಧ ಸಂಘಟನೆಗಳು, ಜನಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿಗಳು ಮೆರವಣಿಗೆ ಹಾಗೂ ಸಮಾರಂಭದಲ್ಲಿ ಭಾಗವಹಿಸುವಂತೆ ಜಿಲ್ಲಾ ಸಮಾಜಕಲ್ಯಾಣಾಧಿಕಾರಿ ಕಲ್ಲೇಶ್ ಅವರು ತಿಳಿಸಿದ್ದಾರೆ.
0 comments:
Post a Comment