ಕೊಪ್ಪಳ ಅ. ) : ಕೊಪ್ಪಳ ನಗರಸಭೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನಾಂಗದವರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
೨೦೧೦-೧೧ ನೇ ಸಾಲಿನ ಶೇ. ೨೨.೭೫ ರ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೌಲಭ್ಯಗಳ ವಿವರ ಇಂತಿದೆ. ಪದವಿ ಪೂರ್ವ ಹಾಗೂ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳಿಗೆ ನೆರವು ನೀಡುವುದು, ಕಂಪ್ಯೂಟರ್ ತರಬೇತಿ ಹೊಂದಿದವರಿಗೆ ಕಂಪ್ಯೂಟರ್ ಒದಗಿಸುವುದು. ನಿರುದ್ಯೋಗಿಗಳಿಗೆ ವಾಹನ ಚಾಲನೆ ತರಬೇತಿ ನೀಡುವುದು, ವಿದ್ಯಾರ್ಥಿ ನಿಲಯಗಳಿಗೆ ಶೈಕ್ಷಣಿಕ ಪುಸ್ತಕಗಳನ್ನು ಒದಗಿಸುವುದು, ವ್ಯಾಪಾರ ಮಾಡಲು ರೂ. ೪,೦೦೦ ರಂತೆ ಸಹಾಯಧನ ನೀಡುವ ಸೌಲಭ್ಯಗಳನ್ನು ಮಂಜೂರು ಮಾಡಲಾಗುವುದು. ಅರ್ಹ ಅಭ್ಯರ್ಥಿಗಳು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪದವಿ ಪೂರ್ವ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಯಿಂದ ವ್ಯಾಸಾಂಗ ಮಾಡುತ್ತಿರುವ ಬಗ್ಗೆ ಪ್ರಮಾಣ ಪತ್ರ, ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ, ಘನ ವಾಹನ ಚಾಲನೆ ತರಬೇತಿಗಾಗಿ ನಿರುದ್ಯೋಗ ಪ್ರಮಾಣ ಪತ್ರ, ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿರುವ ಬಗ್ಗೆ ದಾಖಲಾತಿಗಳು ಹಾಗೂ ಇತ್ತೀಚಿನ ೫ ಭಾವಚಿತ್ರಗಳನ್ನು ಲಗತ್ತಿಸಿ ಪೌರಾಯುಕ್ತರು, ನಗರಸಭೆ, ಕೊಪ್ಪಳ ಇವರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
0 comments:
Post a Comment