ಕೊಪ್ಪಳ ಅ.: ರಾಷ್ಟ್ರೀಯ ಸ್ವಾಸ್ಥ ಬೀಮಾ ಯೋಜನೆಯ ಅನುಷ್ಠಾನ ಕುರಿತಂತೆ ಅ. ೨೧ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.
ಅಸಂಘಟಿತ ವಲಯದ ಕಾರ್ಮಿಕರು, ಬೀದಿಬದಿಯ ವ್ಯಾಪಾರಿಗಳು, ಕಟ್ಟಡ ಕೂಲಿಕಾರ್ಮಿಕರು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವಾರ್ಷಿಕ ಗರಿಷ್ಠ ೩೦೦೦೦ ರೂ.ಗಳ ಮೊತ್ತದ ಉಚಿತ ವೈದ್ಯಕೀಯ ನೆರವು ಒದಗಿಸಬಹುದಾದ ರಾಷ್ಟ್ರೀಯ ಸ್ವಾಸ್ಥ ಬೀಮಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಅಗತ್ಯ ಸಿದ್ಧತೆಗಳ ಕುರಿತು ಮಾಹಿತಿ ಒದಗಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment