ಕೊಪ್ಪಳ ಅ. ): ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆ ಮತ್ತು ಜಿಲ್ಲಾ ಆಡಳಿತ ಇವರ ಸಹಯೋಗದೊಂದಿಗೆ ವಿಶ್ವ ಸಾಂಖ್ಯಿಕ ದಿನಾಚರಣೆ ಕಾರ್ಯಕ್ರಮ ಅ. ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ, ಮುಖ್ಯ ಯೋಜನಾಧಿಕಾರಿ ಟಿ.ಪಿ. ದಂಡಿಗದಾಸರ, ಸಹಾಯಕ ಆಯುಕ್ತ ಎಂ. ಶರಣಬಸಪ್ಪ, ಜಂಟಿಕೃಷಿ ನಿರ್ದೇಶಕ ಬಾಲರೆಡ್ಡಿ, ತೋಟಗಾರಿಕೆ ಉಪನಿರ್ದೇಶಕ ಎಸ್.ಕೆ. ಪೊಲೀಸ್ ಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಅವರು ತಿಳಿಸಿದ್ದಾರೆ.
0 comments:
Post a Comment