PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ :  ಭತ್ತದ ಕಣಜ ಗಂಗಾವತಿ ನಗರದಲ್ಲಿ ಜರುಗಲಿರುವ ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಗಂಗಾವತಿ ನಗರದ ಚನ್ನಬಸವಸ್ವಾಮಿ ಗಂಜ್ (ಎ.ಪಿ.ಎಂ.ಸಿ) ಆವರಣದಲ್ಲಿರುವ ಸ್ವಾಗತ ಸಮಿತಿ ಕಛೇರಿಯಲ್ಲಿ ಅ. ೨೪ ರಂದು ಬೆಳಿಗ್ಗೆ ೧೦-೩೦ ಕ್ಕೆ ನಡೆಯಲಿದೆ.
  ೭೮ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ, ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮಣ ಸವದಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸುವರು. ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ|| ಆರ್.ಕೆ. ನಲ್ಲೂರ ಪ್ರಸಾದ ಭಾಗವಹಿಸಿ ಸಮ್ಮೇಳನದ ಕಾರ್ಯಚಟುವಟಿಕೆಗಳಿಗೆ ಪ್ರೇರಣೆ ನೀಡಲಿದ್ದಾರೆ.   ಜಿಲ್ಲೆಯ ಸಂಸದರು, ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು, ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಸಲಹಾ ಮಂಡಳಿಯ ಸದಸ್ಯರುಗಳು,  ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ತಾಲೂಕಾ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ನಗರ ಸಭೆ/ಪುರಸಭೆ/ಪಟ್ಟಣ ಪಂಚಾಯತ್ ಅಧ್ಯಕ್ಷರುಗಳು, ಎ.ಪಿ.ಎಂ.ಸಿ ಅಧ್ಯಕ್ಷರುಗಳು, ಗ್ರಾಮ ಪಂಚಾಯತ್ತ ಅಧ್ಯಕ್ಷರುಗಳು, ಪಿಕಾರ್ಡ ಬ್ಯಾಂಕ್ ಅಧ್ಯಕ್ಷರುಗಳು, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷರುಗಳು, ಸ್ವಾಗತ ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕ.ಸಾ.ಪದ ಕಾರ್ಯಾಕಾರಿ ಸಮಿತಿ, ಜಿಲ್ಲೆಯ ಎಲ್ಲಾ ತಾಲೂಕುಗಳ ಕಸಾಪ ಅಧ್ಯಕ್ಷರುಗಳು ಹಾಗೂ ಕಾರ್ಯಾಕಾರಿ ಸಮಿತಿ ಸದಸ್ಯರುಗಳು, ಜಿಲ್ಲೆಯ ಹಿರಿಯ ಸಾಹಿತಿಗಳು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಸಹೆ ಸೂಚನೆ ನೀಡಿ ಸಮ್ಮೇಳನವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಸ್ವಾಗತ ಸಮಿತಿಯ ಪ್ರಧಾನಕಾರ್ಯದರ್ಶಿ ಹಾಗೂ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ  ಕೋರಿದ್ದಾರೆ.

Advertisement

0 comments:

Post a Comment

 
Top