ಕೊಪ್ಪಳ ಅ. : ಮೀನುಗಾರಿಕೆ ಇಲಾಖೆಯು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಿ. ಆರ್. ಪ್ರಾಜೆಕ್ಟ್‌ನಲ್ಲಿರುವ ಮೀನುಗಾರಿಕೆ ತರಬೇತಿ ಕೇಂದ್ರದಲ್ಲಿ ಒಳನಾಡು ಮೀನುಗಾರಿಕೆ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಅಹ್ವಾನಿಸಿದೆ.
ಒಳನಾಡು ಮೀನುಗಾರಿಕೆ ತರಬೇತಿಯು ಪುರುಷರಿಗೆ ಮಾತ್ರ ಅವಕಾಶವಿದ್ದು ಸುಮಾರು ೪೦ ಗ್ರಾಮೀಣ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿ ೨ (ಎರಡು) ತಿಂಗಳ ಅವಧಿಯಾಗಿದ್ದು ಪ್ರತಿ ಅಭ್ಯರ್ಥಿಗೆ ಮಾಸಿಕ ೧೦೦೦ ರೂ. ಶಿಷ್ಯ ವೇತನ ಕೊಡಲಾಗುವುದು. ಅಭ್ಯರ್ಥಿಯು ತರಬೇತಿಯ ಮಧ್ಯದಲ್ಲಿ ಬಿಟ್ಟು ಹೋದಲ್ಲಿ ಅಂತಹವರಿಂದ ಇಲಾಖೆಯಿಂದ ಕೊಡಲ್ಪಟ್ಟ ಶಿಷ್ಯವೇತನವನ್ನು ಅವರ ಸ್ವಂತ ಜವಾಬ್ಧಾರಿಯಿಂದ ವಸೂಲು ಮಾಡಲಾಗುವುದು. ತರಬೇತಿ ಅವಧಿಯಲ್ಲಿ ಮೀನು ಮರಿ ಉತ್ಪಾದನೆ, ಪಾಲನೆ, ಹಂಚಿಕೆ, ಮೀನು ಸಾಕಣೆ, ಬಲೆ ಹೆಣೆಯುವುದು, ದುರಸ್ತಿ ಮಾಡುವುದು, ಹರಿಗೋಲು ನಡೆಸುವುದು, ಮೀನು ಹಿಡಿಯುವುದು, ಅಲಂಕಾರಿಕ ಮೀನು ಉತ್ಪಾದನೆ, ಪಾಲನೆ, ಇತ್ತೀಚಿನ ಬೆಳವಣಿಗೆಗಳು ಮುಂತಾದ ವಿಷಯಗಳಲ್ಲಿ ತರಬೇತಿ ನೀಡಲಾಗುವುದು.
ಅಭ್ಯರ್ಥಿಯ ವಯಸ್ಸು ೧೮ ರಿಂದ ೪೦ ರ ಒಳಗಿರಬೇಕು. ಹತ್ತನೇ ತರಗತಿವರೆಗೆ (ಪಾಸ್ ಅಥವಾ ಫೇಲ್) ಓದಿರಬೇಕು. ಕೊಪ್ಪಳ, ಬೀದರ್, ಗುಲ್ಬರ್ಗಾ, ಯಾದಗಿರಿ, ಚಿತ್ರದುರ್ಗ, ರಾಯಚೂರು, ಧಾರವಾಡ, ಬಿಜಾಪುರ, ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ಗದಗ, ದಾವಣಗೆರೆ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ ಜಿಲ್ಲೆಯವರಾಗಿರಬೇಕು. ತರಬೇತಿ ಅವಧಿಯಲ್ಲಿ ಇಲಾಖೆಯು ಒದಗಿಸುವ ಉಚಿತ ವಸತಿ ಗೃಹದಲ್ಲಿ ಕಡ್ಡಾಯವಾಗಿ ತಂಗಲೇಬೇಕು. ಮೀನುಗಾರಿಕೆ ವೃತ್ತಿ ನಡೆಸುತ್ತಿರುವವರು : ಮೀನುಗಾರಿಕೆ ಸಹಕಾರ ಸಂಘದ ಸದಸ್ಯರು ಇತ್ಯಾದಿ ಸದಸ್ಯರಿಗೆ ಆದ್ಯತೆ ನೀಡಲಾಗುವುದು. ಸಂದರ್ಶನದ ಮೂಲಕ ಅಭ್ಯರ್ಥಿಯ ಆಯ್ಕೆ ಮಾಡಲಾಗುವುದು. ಸಂದರ್ಶನಕ್ಕೆ ಅಭ್ಯರ್ಥಿಯು ಸ್ವಂತ ಖರ್ಚಿನಲ್ಲಿ ಹಾಜರಾಬೇಕು. ಅರ್ಜಿಗಳನ್ನು ಜಿಲ್ಲಾ ಮಟ್ಟದ/ತಾಲ್ಲೂಕು ಮಟ್ಟದ ಮೀನುಗಾರಿಕೆ ಕಛೇರಿಗಳಲ್ಲಿ ಇರುವ ಅರ್ಜಿ ನಮೂನೆಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಯಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಶ್ರೇಣಿ-೧), ಮೀನುಗಾರಿಕೆ ತರಬೇತಿ ಕೇಂದ್ರ, ಬಿ. ಆರ್. ಪ್ರಾಜೆಕ್ಟ್, ಶಿವಮೊಗ್ಗ ಜಿಲ್ಲೆ ಇವರಿಗೆ ಅ. ೧೮ ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಜಿಲ್ಲಾ ಮಟ್ಟದ/ತಾಲ್ಲೂಕು ಮಟ್ಟದ ಮೀನುಗಾರಿಕೆ ಕಛೇರಿಗಳು, ಜಿಲ್ಲಾ ಪಂಚಾಯತಿ ಕಛೇರಿಯಿಂದ ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment