ಕೊಪ್ಪಳ ಅ. : ರಾಷ್ಟ್ರೀಯ ಅಂಗವಿಕಲ ಹಣಕಾಸು ಮತ್ತು ಅಭಿವೃದ್ಧಿ ನಿಗಮ, ಬೆಂಗಳೂರು ಇವರ ವತಿಯಿಂದ ಅಂಗವಿಕಲ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಿದೆ.
ರಾಷ್ಟ್ರೀಯ ಅಂಗವಿಕಲ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ವತಿಯಿಂದ ಭಾರತದಲ್ಲಿ ಅಂಗವಿಕಲ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ರೂ. ೧೦ ಲಕ್ಷ ಮತ್ತು ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ರೂ. ೨೦ ಲಕ್ಷಗಳನ್ನು ಶೇ. ೪ ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಲ್ಲದೆ ಅಂಗವಿಕಲ ಮಹಿಳಾ ವಿದ್ಯಾರ್ಥಿಗಳಿಗೆ ಬಡ್ಡಿ ದರದಲ್ಲಿ ಶೇ. ೦.೫ ರಷ್ಟು ವಿನಾಯಿತಿ ಇದೆ. ಅರ್ಹ ಅಂಗವಿಕಲ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ನಿರ್ದೇಶಕರು, ರಾಷ್ಟ್ರೀಯ ಅಂಗವಿಕಲ ಹಣಕಾಸು ಮತ್ತು ಅಭಿವೃದ್ಧಿ ನಿಗಮ, ಬೆಂಗಳೂರು ರವರನ್ನು ಅಥವಾ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿಗಳು ಜಿಲ್ಲಾಡಳಿತ ಭವನ, ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಕಲ್ಲೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment