ಕೊಪ್ಪಳ ಅ. ): ರಾಯಚೂರಿನ ಕೃಷಿ ವಿಶ್ವ ವಿದ್ಯಾಲಯ ವ್ಯಾಪ್ತಿಗೆ ಸೇರಿದ ವಿಸ್ತರಣಾ ಶಿಕ್ಷಣ ಘಟಕದ ಉದ್ಘಾಟನಾ ಸಮಾರಂಭ ಅ. ೦೮ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಕೊಪ್ಪಳದ ಕರ್ನಾಟಕ ಸರ್ಕಾರಿ ನೌಕರರ ಭವನ ಆವರಣದಲ್ಲಿ ನಡೆಯಲಿದೆ.
ಕೊಪಫಳ ನೂತನ ಶಾಸಕ ಸಂಗಣ್ಣ ಕರಡಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು. ಸಂಸದ ಶಿವರಾಮಗೌಡ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಹಸ್ತಪತ್ರಿಕೆಗಳ ಬಿಡುಗಡೆ ಮಾಡುವರು. ರಾಯಚೂರು ಕೃಷಿ ವಿ.ವಿ. ಕುಲಪತಿ ಡಾ. ಬಿ.ವಿ. ಪಾಟೀಲ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಸುನೀಲ್ ವಲ್ಲ್ಯಾಪುರ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್. ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಶಾಸಕರುಗಳಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ್, ಶಿವರಾಜ ಎಸ್ ತಂಗಡಗಿ, ಶಶಿಲ್ ನಮೋಶಿ, ಹೆಚ್.ಸಿ. ನೀರಾವರಿ, ಮನೋಹರ ಮಸ್ಕಿ, ಹಾಲಪ್ಪ ಆಚಾರ್, ಜಿ.ಪಂ. ಉಪಾಧ್ಯಕ್ಷೆ ಡಾ. ಸೀತಾ ಹಲಗೇರಿ, ಕೊಪ್ಪಳ ತಾ.ಪಂ. ಅಧ್ಯಕ್ಷ ಅಮರೇಶ ಉಪಲಾಪುರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಸೇರಿದಂತೆ ರಾಯಚೂರು ಕೃಷಿ ವಿ.ವಿ. ವ್ಯವಸ್ಥಾಪಕ ಮಂಡಳಿ ಸದಸ್ಯರುಗಳು, ಮುಂತಾದ ಗಣ್ಯರು ಸಮಾರಂಭದಲ್ಲಿ ಭಾಗವಹಿಸುವರು.
0 comments:
Post a Comment