PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಅ. : ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಾನೂನು ಪದವಿ ಪಡೆದಿರುವ ಮತೀಯ ಅಲ್ಪಸಂಖ್ಯಾತ ಜನಾಂಗದ ಅಭ್ಯರ್ಥಿಗಳಿಗೆ ೪ ವರ್ಷಗಳ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.
ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ಕಾನೂನು ಪದವಿಧರ ಅಭ್ಯರ್ಥಿಗಳಿಗೆ ೪ ವರ್ಷಗಳ ಅವಧಿಯ ತರಬೇತಿಗಾಗಿ ಅರ್ಜಿ ಆಹ್ವಾನಿಸಿದ್ದು, ತರಬೇತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ೨ ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೊಂದಾಯಿಸಿರಬೇಕು. ವಯಸ್ಸು ೩೦ ವರ್ಷದೊಳಗಿದ್ದು, ವಾರ್ಷಿಕ ಆದಾಯ ರೂ. ೧೫,೦೦೦ ಗಳು ಮೀರಿರಬಾರದು. ಪ್ರವರ್ಗ -೧ ರ ಅಭ್ಯರ್ಥಿಗಳಿಗೆ ಆದಾಯ ಮಿತಿ ಇರುವುದಿಲ್ಲ. 
ಅಭ್ಯರ್ಥಿಯು ನಿಗದಿತ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಪ್ಪಳ ಇವರಿಂದ ಪಡೆದು ಸಂಬಂಧಿಸಿದ ದಾಖಲೆಗಳ ನಕಲು ಪ್ರತಿಗಳೊಂದಿಗೆ ಅ. ೩೧ ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Advertisement

0 comments:

Post a Comment

 
Top