PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಅ.: ಅಕ್ಟೋಬರ್ ೩೧ ದಿನವನ್ನು ಭ್ರಷ್ಟಾಚಾರ ವಿರೋಧಿ ದಿನವನ್ನಾಗಿ ಆಚರಿಸಲಾದ ನಿಮಿತ್ಯ,  ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅನ್ನದಾನಯ್ಯ ಅವರು ಎಲ್ಲ ಅಧಿಕಾರಿ ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. 
  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಸಾರ್ವಜನಿಕ ನೌಕರರಾದ ನಾವು ನಮ್ಮ ಎಲ್ಲಾ ಕಾರ್ಯಕ್ಷೇತ್ರಗಳಲ್ಲಿ ಪ್ರಾಮಾಣಿಕೆ ಮತ್ತು ಪಾರದರ್ಶಕತೆಯನ್ನು ತರಲು ನಿರಂತರವಾಗಿ ಶ್ರಮಿಸುತ್ತೇವೆ.  ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಕಾರ್ಯಶೀಲರಾಗುತ್ತೇವೆ.  ನಾವು ಯಾವಾಗಲೂ ಜಾಗೃತರಾಗಿರುತ್ತೇವೆ ಮತ್ತು ನಮ್ಮ ಸಂಸ್ಥೆಯ ಅಭಿವೃದ್ಧಿ ಮತ್ತು ಘನತೆಗಾಗಿ ಕಾರ್ಯನಿರ್ವಹಿಸುತ್ತೇವೆ.  ನಮ್ಮ ಸಾಂಘಿಕ ಪ್ರಯತ್ನಗಳ ಮುಖೇನ ನಮ್ಮ ಸಂಸ್ತೆಗೆ ಹೆಮ್ಮೆಯನ್ನು ತರುತ್ತೇವೆ. ನಮ್ಮ ನಾಡ ಜನತೆಗೆ ಮೌಲ್ಯಾಧಾರಿತ ಸೇವೆಯನ್ನು ಒದಗಿಸುತ್ತೇವೆ.  ನಾವು ನಮ್ಮ ಕರ್ತವ್ಯಗಳನ್ನು ಅಂತಃಕರಣದಿಂದ ನಿರ್ವಹಿಸುತ್ತೇವೆ ಮತ್ತು ಯಾವುದೇ ಭಯ ಅಥವಾ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸುತ್ತೇವೆ ಎಂಬ ಪ್ರತಿಜ್ಞಾ ವಿಧಿಯನ್ನು ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಸ್ವೀಕರಿಸಿದರು.
  ಸಹಾಯಕ ಆಯುಕ್ತ ಎಂ. ಶರಣಬಸಪ್ಪ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಟಿ.ಪಿ. ದಂಡಿಗದಾಸರ್ ಸೇರಿದಂತೆ ಜಿಲ್ಲಾಡಳಿತ ಭವನದಲ್ಲಿ ಕಾರ್ಯ ನಿರ್ವಹಿಸುವ ವಿವಿಧ ಇಲಾಖೆಗಳ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

Advertisement

0 comments:

Post a Comment

 
Top