ಕೊಪ್ಪಳ ಅ. : ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಕೊಪ್ಪಳ ಹಾಗೂ ಲೋಕೋಪಯೋಗಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಕೀಲರ ಕೊಠಡಿಗಳ ಸಂಕೀರ್ಣ ಮತ್ತು ಸಾಕ್ಷಿದಾರರ ಮೊಗಸಾಲೆ ಕಟ್ಟಡಗಳ ಉದ್ಘಾಟನಾ ಸಮಾರಂಭ ಅ. ೨೨ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಹೆಚ್.ಜಿ. ರಮೇಶ್ ಅವರು ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದು, ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮೋಹನ ಶಾಂತನಗೌಡರ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವರಾದ ಲಕ್ಷ್ಮಣ ಎಸ್ ಸವದಿ, ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ರಾಜ್ಯ ವಕೀಲರ ಪರಿಷತ್ ಸದಸ್ಯೆ ಸಂಧ್ಯಾ ಬಿ. ಮಾದಿನೂರ ಅವರು ಪಾಲ್ಗೊಳ್ಳುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪ್ರಭುರಾಜ ಎಲ್. ಇನಾಮತಿ, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಎಸ್. ಮಾಳಗಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ವೆಂಕಟೇಶ ಎಲ್. ಮಾಲಗಿತ್ತಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಹೆಚ್. ಲಷ್ಕರಿ ನಾಯ್ಕ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
0 comments:
Post a Comment