PLEASE LOGIN TO KANNADANET.COM FOR REGULAR NEWS-UPDATES


ಬೆಂಗಳೂರು, ಅ.4: ಡಿನೋಟಿಫಿಕೇಷನ್ ಪ್ರಕರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪ ವಿರುದ್ಧ ವಕೀಲ ಸಿರಾಜಿನ್ ಬಾಷಾ ದಾಖಲಿಸಿದ್ದ ಎರಡನೆ ಹಾಗೂ ಮೂರನೆ ಖಾಸಗಿ ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಎಲ್ಲ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠ ಮಂಗಳವಾರ ರದ್ದುಗೊಳಿಸಿದೆ. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿರಾಜಿನ್ ಬಾಷಾ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ಎನ್.ಕುಮಾರ್ ಮತ್ತು ನ್ಯಾ. ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಸದರಿ ದೂರುಗಳಿಗೆ ಅ.14ವರೆಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿತು. ಜೊತೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹಸಿರು ನಿಶಾನೆ ತೋರಿಸಿದೆ. ಇದರೊಂದಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಕ್ಷಣೆ ಪಡೆದಿದ್ದ ಯಡಿಯೂರಪ್ಪರಿಗೆ ನ್ಯಾಯಾಂಗ ಬಂಧನದ ಭೀತಿ ಮತ್ತೆ ಕಾಡಲಿದೆ.

ಆದೇಶವೇನು?: ಸತ್ಯ ನಾರಾಯಣ ಶರ್ಮ ಮತ್ತು ರಾಜಸ್ಥಾನ ರಾಜ್ಯದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಕಲಂ 19(3)(ಸಿ)ಯಡಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಿಗೆ ತಡೆಯಾಜ್ಞೆ ನೀಡುವ ಅಧಿಕಾರ ಹೈಕೋರ್ಟ್‌ಗಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. 2001ರಲ್ಲಿ ದೇಶದ ಎಲ್ಲ ರಾಜ್ಯಗಳ ಹೈಕೋರ್ಟ್ ಹಾಗೂ ಅಧೀನ ನ್ಯಾಯಾ ಲಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳಿಗೆ ನೀಡಿದ್ದ ತಡೆಯಾಜ್ಞೆಯನ್ನು ತೆರವು ಗೊಳಿಸಿದೆ. ಆದುದರಿಂದ ಭ್ರಷ್ಟಾಚಾರ ಪ್ರಕರಣದ ಸಂಬಂಧ ಅಧೀನ ನ್ಯಾಯಾಲಯದ ವಿಚಾರಣೆ ಯಲ್ಲಿ ಹೈಕೋರ್ಟ್ ಹಸ್ತಕ್ಷೇಪ ವಹಿಸಬಾರದು. ಸೂಕ್ತ ಕಾರಣವಿದ್ದಲ್ಲಿ ಮಾತ್ರ ಪ್ರಕರಣದ ವಿಚಾರಣೆ ಯನ್ನು ರದ್ದುಗೊಳಿಸಬಹುದೆ ಹೊರತು ತಡೆ ಯಾಜ್ಞೆ ನೀಡುವಂತಿಲ್ಲ ಎಂದು ವಿಭಾಗೀಯ ಪೀಠ ಆದೇಶಿಸಿದೆ.
ಖಾಸಗಿ ದೂರುದಾರ ಬಾಷಾ ರಾಜ್ಯಪಾಲ ರಿಂದ ಅನುಮತಿ ಪಡೆದು ದೂರು ದಾಖಲಿಸಿದ್ದಾರೆ. ಜೊತೆಗೆ ದೂರಿನ ಸಂಬಂಧ ಅಧೀನ ನ್ಯಾಯಾ ಲಯ ವಿಚಾರಣೆ ನಡೆಸುತ್ತಿದೆ. ಇಂತಹ ಸಂದರ್ಭ ದಲ್ಲಿ ಅಧೀನ ನ್ಯಾಯಾಲಯದ ವಿಚಾರಣೆಯಲ್ಲಿ ಹೈಕೋರ್ಟ್ ಹಸ್ತಕ್ಷೇಪ ವಹಿಸುವುದು ಸೂಕ್ತವಲ್ಲ. ಜೊತೆಗೆ ಬಾಷಾರ ಎರಡೂ ದೂರಿಗಳಿಗೆ ತಡೆ ಯಾಜ್ಞೆ ನೀಡುವ ಸಂದರ್ಭದಲ್ಲಿ ಏಕ ಸದಸ್ಯ ಪೀಠ ಸುಪ್ರೀಂಕೋರ್ಟ್ ಆದೇಶವನ್ನು ಪರಿಗಣಿಸಿಲ್ಲ. ಅಲ್ಲದೆ, ತಡೆಯಾಜ್ಞೆ ಆದೇಶಕ್ಕೆ ಸೂಕ್ತ ಕಾರಣ ನೀಡಿಲ್ಲ. ಎಂದು ಏಕ ಸದಸ್ಯ ಪೀಠದ ವಿರುದ್ಧ ವಿಭಾಗೀಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.
ವಕೀಲರು ವಿಚಾರಣೆಯನ್ನು ವಿಳಂಬ ಮತ್ತು ನ್ಯಾಯಾಲಯದ ಸಮಯವನ್ನು ಹರಣ ಮಾಡುತ್ತಿ ದ್ದಾರೆ ಎಂದು ಪ್ರಕರಣದ ವಿಚಾರಣೆ ತಡೆಯಾಜ್ಞೆ ನೀಡುವುದು ಸೂಕ್ತವಲ್ಲ. ಸಾಮಾನ್ಯ ವ್ಯಕ್ತಿ ನ್ಯಾಯಾಂಗ ವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟು ಭ್ರಷ್ಟಾಚಾರ ಸಂಬಂಧ ದೂರು ದಾಖಲಿಸುತ್ತಾರೆ. ಪೊಲೀಸರು ಆ ಪ್ರಕರಣಗಳನ್ನು ನ್ಯಾಯಾಲಯದ ಅಂಗಳಕ್ಕೆ ತುರುತ್ತಾರೆ. ಹೀಗಿದ್ದಾಗ ಭ್ರಷ್ಟಾಚಾರ ಪ್ರಕರಣಗಳಿಗೆ ತಡೆಯಾಜ್ಞೆ ನೀಡಿದಲ್ಲಿ, ಆರೋಪಿ ಗಳು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಆದುದರಿಂದ ನ್ಯಾಯಾಂಗ ವ್ಯವಸ್ಥೆ ಹಾಗೂ ನ್ಯಾಯಾಮೂರ್ತಿ ಗಳು ಕಾನೂನು ವ್ಯಾಪ್ತಿಯಲ್ಲಿ ನಿರ್ವಹಿಸಬೇಕಾ ಗುತ್ತದೆ ಎಂದು ವಿಭಾಗೀಯ ಪೀಠ ಆದೇಶದಲ್ಲಿ ಉಲ್ಲೇಖಿಸಿದೆ.

ಪ್ರಕರಣವೇನು?:
 ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ತಮ್ಮ ಆಪ್ತ ಹಾಗೂ ಸಂಬಂಧಿಕರಿಗೆ ಸರಕಾರಿ ಭೂಮಿಯನ್ನು ಅಕ್ರಮ ವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿ ಸಿರಾಜಿನ್ ಬಾಷಾ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಎರಡನೆ ಹಾಗೂ ಮೂರನೆ ಖಾಸಗಿ ದೂರನ್ನು ದಾಖಲಿಸಿದ್ದರು. ಬಾಷಾರ ಪ್ರಮಾಣೀಕೃತ ಹೇಳಿಕೆ ಪಡೆದಿದ್ದ ವಿಶೇಷ ನ್ಯಾಯಾಲಯ ಆ.8ರಂದು ಯಡಿಯೂರಪ್ಪರಿಗೆ ಸಮನ್ಸ್ ಜಾರಿ ಮಾಡಿತ್ತು. ಅಲ್ಲದೆ, ಬಿಎಸ್‌ವೈ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪುನ್ನು ಕಾಯ್ದಿರಿಸಿತ್ತು. ಬಂಧನದ ಭೀತಿಯಿಂದಾಗಿ ಯಡಿಯೂರಪ್ಪ ಎರಡೂ ದೂರುಗಳ ಸಂಬಂಧ ಅಧೀನ ನ್ಯಾಯಾಲಯ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಕೋರಿದ್ದರು. ಇದನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಮಾನ್ಯ ಮಾಡಿತ್ತು.

Advertisement

0 comments:

Post a Comment

 
Top