PLEASE LOGIN TO KANNADANET.COM FOR REGULAR NEWS-UPDATES


 ಕೊಪ್ಪಳ ನ. ) : ಕೊಪ್ಪಳ ಜಿಲ್ಲೆಯಲ್ಲಿ ರಾತ್ರಿಯ ವೇಳೆ ಮರಳು ತುಂಬಿದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಆದೆಶ ಹೊರಡಿಸಿದ್ದಾರೆ.
  ಕೊಪ್ಪಳ ಜಿಲ್ಲೆಯಲ್ಲಿ ಮರಳು ತುಂಬಿದ ಅನೇಕ ವಾಹನಗಳು ರಾತ್ರಿ ಸಮಯದಲ್ಲಿ ಅಧಿಕೃತ ಪರವಾನಿಗೆ ಇಲ್ಲದೆ ಕಳ್ಳ ಸಾಗಾಣಿಕೆ ಮಾಡುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ರೂಪಿಸಿದ ವ್ಯವಸ್ಥೆಗೆ ಧಕ್ಕೆಯುಂಟಾಗಿ ನಷ್ಟವಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಮೋಟಾರು ವಾಹನಗಳ ನಿಯಮಗಳು ೧೯೮೯ ರ ನಿಯಮ ೨೨೧(ಎ) (೫) ರಲ್ಲಿನ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ನ. ೧೮ ರಿಂದ ಜಾರಿಗೆ ಬರುವಂತೆ ರಾತ್ರಿ ೮ ಗಂಟೆಯಿಂದ ಬೆಳಿಗ್ಗೆ ೬ ಗಂಟೆಯವರೆಗೆ ಮರಳು ತುಂಬಿದ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.  ನಿಯಮ ಉಲ್ಲಂಘಿಸಿ ಸಂಚರಿಸುವ ಮರಳು ತುಂಬಿದ ವಾಹನಗಳನ್ನು ಜಪ್ತಿ ಮಾಡಿ, ಅಂತಹ ವಾಹನ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು  ತಿಳಿಸಿದ್ದಾರೆ.

Advertisement

0 comments:

Post a Comment

 
Top