ಬೆಂಗಳೂರು, 2: ಬಿಜೆಪಿಯ ಎನ್. ಶಂಕರಪ್ಪನವರ ರಾಜೀನಾಮೆ ಯಿಂದ ತೆರವಾಗಿದ್ದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಡಿ.12ರಂದು ಚುನಾವಣೆ ನಡೆಯ ಲಿದ್ದು, ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮೇಲ್ಮನೆಗೆ ಸ್ಪರ್ಧಿಸಲಿದ್ದಾರೆ.
ಸಂಸದರಾಗಿರುವ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಆರು ತಿಂಗಳೊಳಗೆ ವಿಧಾನಸಭೆ ಅಥವಾ ವಿಧಾನಪರಿಷತ್‌ನ ಸದಸ್ಯರಾಗಿ ಆಯ್ಕೆಯಾಗಬೇಕು. ಈ ಹಿನ್ನೆಲೆಯಲ್ಲಿ ಎನ್.ಶಂಕರಪ್ಪ ಸದಾನಂದ ಗೌಡರಿಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆ ಯಲಿರುವ ಈ ಚುನಾವಣೆಯಲ್ಲಿ ಸದಾನಂದ ಗೌಡ ಆಯ್ಕೆ ಬಹುತೇಕ ಖಚಿತವಾಗಿದೆ.
ವಿಧಾನಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿರುವುದರಿಂದ ಸದಾನಂದ ಗೌಡರ ಆಯ್ಕೆ ಸುಲಭ ವಾಗಲಿದೆ. ಅಲ್ಲದೆ, ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ ಗೆಲ್ಲುವು ಸಾಧಿಸುವುದು ಕಷ್ಟ. ಚುನಾ ವಣೆಗೆ ನ.25ರಂದು ಅಧಿಸೂಚನೆ ಹೊರಬೀಳಲಿದ್ದು, ಡಿ.2ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಡಿ.3ರಂದು ನಾಮಪತ್ರ ಪರಿ ಶೀಲನೆ, ಡಿ.5ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನ ವಾಗಿದೆ. ಡಿ.12ರಂದು ಚುನಾವಣೆ ನಡೆಯಲಿದೆ.
0 comments:
Post a Comment